ಬಡಗಬೆಟ್ಟು ಸೊಸೈಟಿ ಮಹಾಸಭೆಯಲ್ಲಿ ಶೇ.15 ಡಿವಿಡೆಂಡ್ ಘೋಷಣೆ

Update: 2021-11-28 15:17 GMT

ಉಡುಪಿ, ನ.28: ವರ್ಚುಯಲ್/ಆನ್‌ಲೈನ್ ಮೂಲಕ ರವಿವಾರ ನಡೆದ ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸ ಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಂಜೀವ ಕಾಂಚನ್ ವಹಿಸಿದ್ದರು. ಸಂಘದ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ವಾರ್ಷಿಕ ವರದಿ ಮತ್ತು ಪರಿಶೋಧಿತ ಲೆಕ್ಕಪತ್ರಗಳನ್ನು ಮಂಡಿಸಿದರು.

ವರದಿ ಸಾಲಿನ ಅಂತ್ಯಕ್ಕೆ ಸಂಘವು ಒಟ್ಟು 17,501 ಸದಸ್ಯರಿಂದ 4.35 ಕೋಟಿ ರೂ. ಪಾಲು ಬಂಡವಾಳ ಹಾಗೂ 350.33 ಕೋಟಿ ರೂ. ಠೇವಣಿ ಸಂಗ್ರಹಿಸಿದ್ದು, 255.46 ಕೋಟಿ ರೂ. ಹೊರಬಾಕಿ ಸಾಲ ಇರುತ್ತದೆ. ವರದಿ ಸಾಲಿನಲ್ಲಿ ಸಂಘವು 9.12 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸಿತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್, ಸಂಘದ ಹಿರಿಯ ಗುಮಾಸ್ತರಾಗಿ ವಯೋನಿವೃತ್ತಿ ಯಾಗಿರುವ ಆನಂದ ಬಿ. ಅವರನ್ನು ಗೌರವಿಸಲಾಯಿತು.

ಸಂಘದ ಆಡಳಿತ ಮಂಡಳಿ ಸದಸ್ಯರಾದ ಪುರುಷೋತ್ತಮ ಪಿ.ಶೆಟ್ಟಿ. ಹಾಜಿ ಸಯ್ಯದ್ ಅಬ್ದುಲ್ ರಜಾಕ್, ವಸಂತ ಕೆ.ಕಾಮತ್, ವಿನಯ ಕುಮಾರ್ ಟಿ.ಎ., ಜಯಾನಂದ ಮೈಂದನ್, ಪದ್ಮನಾಭ ನಾಯಕ್, ರಘುರಾಮ ಎಸ್.ಶೆಟ್ಟಿ,   ಜಾರ್ಜ್ ಸಾಮ್ಯುವೆಲ್, ಸದಾಶಿವ ನಾಯ್ಕಿ, ಜಯ ಶೆಟ್ಟಿ, ಗಾಯತ್ರಿ ಎಸ್. ಭಟ್, ಸಹಾಯಕ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಎಸ್. ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಎಲ್.ಉಮಾನಾಥ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News