ರಾಜ್ಯದಲ್ಲಿ ರವಿವಾರ 315 ಮಂದಿಗೆ ಕೊರೋನ ದೃಢ, ಇಬ್ಬರು ಮೃತ್ಯು

Update: 2021-11-28 15:41 GMT

ಬೆಂಗಳೂರು, ನ. 28: ರಾಜ್ಯದಲ್ಲಿ ರವಿವಾರ 315 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದು, 236 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,95,600ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,198ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 6,831ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಇಬ್ಬರ ಸಾವು: ಬೆಂಗಳೂರು ನಗರ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 315 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 2, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 152, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿತ್ರದುರ್ಗ 1, ದಕ್ಷಿಣ ಕನ್ನಡ 19, ದಾವಣಗೆರೆ 2, ಧಾರವಾಡ 49, ಹಾಸನ 9, ಕಲಬುರಗಿ 2, ಕೊಡಗು 8, ಮಂಡ್ಯ 1, ಮೈಸೂರು 26, ಶಿವಮೊಗ್ಗ 10, ತುಮಕೂರು 11, ಉಡುಪಿ 10, ಉತ್ತರ ಕನ್ನಡ ಜಿಲ್ಲೆಯಲ್ಲಿ 8  ಪ್ರಕರಣ ಪತ್ತೆಯಾಗಿವೆ.  

ರಾಜಧಾನಿಯಲ್ಲಿ 152 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ರವಿವಾರದಂದು 152 ಜನರಿಗೆ ಕೊರೋನ ಸೋಂಕು ದೃಢಪಟ್ಟಿವೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದು, ಒಟ್ಟು 12,34,519 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,56,136  ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,329 ಜನರು ಸೋಂಕಿಗೆ ಬಲಿಯಾಗಿದ್ದಾರೆ.  

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News