ಅಕ್ರಮ ಗಾಂಜಾ ಮಾರಾಟ: ಓರ್ವನ ಬಂಧನ

Update: 2021-11-28 16:14 GMT

ಉಡುಪಿ, ನ.28: ಅಕ್ರಮ ಗಾಂಜಾ ಮಾರಾಟಕ್ಕೆ ಸಂಬಂಧಿಸಿ ಓರ್ವನನ್ನು ಉಡುಪಿ ಸೆನ್ ಪೊಲೀಸರು ರವಿವಾರ ಬೆಳಗ್ಗೆ ಮೂಡುಬೆಟ್ಟು ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ.

ಗೌತಮ ಬುದ್ದ ಬಂಧಿತ ಆರೋಪಿ. ಈತನಿಂದ 35,000 ರೂ. ಮೌಲ್ಯದ 1 ಕಿಲೋ, 204 ಗ್ರಾಂ ತೂಕದ ಗಾಂಜಾವನ್ನು ಮತ್ತು ಮೊಬೈಲ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈತ ಪ್ರಣಮ್ ಎಂಬಾತನಿಂದ ಗಾಂಜಾವನ್ನು ಪಡೆದುಕೊಂಡು ಅದನ್ನು ಆತನ ಸೂಚನೆಯ ಮೇರೆಗೆ ಮಾರಾಟ ಮಾಡಲು ಗಿರಾಕಿ ಕಾಯುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News