ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ರಾಜಕೀಯ ಪಕ್ಷಗಳ ಆಗ್ರಹ

Update: 2021-11-28 16:30 GMT

ಹೊಸದಿಲ್ಲಿ, ನ.28: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸುವಂತೆ ರವಿವಾರ ಇಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಟಿಎಂಸಿ, ವೈಎಸ್‌ಆರ್ ಕಾಂಗ್ರೆಸ್ ಮತ್ತು ಡಿಎಂಕೆ ಸೇರಿದಂತೆ ಹಲವಾರು ಪಕ್ಷಗಳು ಆಗ್ರಹಿಸಿವೆ. ದೇಶದ ನೀತಿ ನಿರೂಪಣೆಯಲ್ಲಿ ಮಹಿಳೆಯರಿಗೆ ಸಲ್ಲಬೇಕಾದ ಪ್ರಾತಿನಿಧ್ಯವನ್ನು ನೀಡಲು ಇದು ಸಕಾಲವಾಗಿದೆ ಎಂದು ಪಕ್ಷಗಳು ತಿಳಿಸಿದವು.

2010ರಿಂದಲೂ ರಾಜ್ಯಸಭೆಯಲ್ಲಿ ಬಾಕಿಯಾಗಿದ್ದ ಮಹಿಳಾ ಮೀಸಲಾತಿ ಮಸೂದೆ ಮತ್ತು ಸಂವಿಧಾನ (108ನೇ ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಲು 15ನೇ ಲೋಕಸಭೆಗೆ ಸಾಧ್ಯವಾಗಿರಲಿಲ್ಲ. 2014ರಲ್ಲಿ ಲೋಕಸಭೆಯ ವಿಸರ್ಜನೆಯೊಂದಿಗೆ ಮಸೂದೆಗಳು ಅಸ್ತಿತ್ವವನ್ನು ಕಳೆದುಕೊಂಡಿದ್ದವು.

ಮಸೂದೆಯು ಮಹಿಳೆಯರಿಗೆ 15 ವರ್ಷಗಳ ಅವಧಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿಯನ್ನು ಒದಗಿಸುತ್ತದೆ. ಲೋಕಸಭೆಯಲ್ಲಿ ಬಾಕಿಯಿರುವ ಎಲ್ಲ ಮಸೂದೆಗಳು ಅದರ ವಿಸರ್ಜನೆಯೊಂದಿಗೆ ಅಸ್ತಿತ್ವವನ್ನು ಕಳೆದುಕೊಳ್ಳುತ್ತವೆ. ರಾಜ್ಯಸಭೆಯಲ್ಲಿ ಬಾಕಿಯಿರುವ ಮಸೂದೆಗಳನ್ನು ‘ಲೈವ್ ರಜಿಸ್ಟರ್ ’ನಲ್ಲಿ ಇರಿಸಲಾಗುತ್ತದೆ ಮತ್ತು ಅವುಗಳನ್ನು ನಂತರ ಕೈಗೆತ್ತಿಕೊಳ್ಳಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News