ಚಾಮರಾಜನಗರ ಮೆಡಿಕಲ್ ಕಾಲೇಜಿನ ಏಳು ಮಂದಿಗೆ ಕೋವಿಡ್ ಸೊಂಕು

Update: 2021-11-29 13:46 GMT

ಚಾಮರಾಜನಗರ: ನಗರದ ಹೊರವಲಯದ ಯಡಬೆಟ್ಟದಲ್ಲಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಸಿಮ್ಸ್) ಸೋಮವಾರ ಏಳು ಮಂದಿಗೆ ಕೋವಿಡ್ ಇರುವುದು ದೃಢಪಟ್ಟಿದೆ.

ಚಾಮರಾಜನಗರ ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್ ಸೋಂಕಿತರಲ್ಲಿ  ಆರು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಒಬ್ಬರು ಹೌಸ್ ಸರ್ಜನ್ ಆಗಿದ್ದಾರೆ.  ಹತ್ತು ದಿನಗಳ ಅವಧಿಯಲ್ಲಿ ವೈದ್ಯಕೀಯ ಕಾಲೇಜಿನಲ್ಲಿ ಒಂಬತ್ತು ಪ್ರಕರಣಗಳು ವರದಿಯಾಗಿವೆ. 

ಮೆಡಿಕಲ್ ಕಾಲೇಜಿನ  ಡೀನ್ ಹಾಗೂ ನಿರ್ದೇಶಕ ಡಾ.ಜಿ.ಎಂ.ಸಂಜೀವ್ ಅವರಿಗೂ ಕೋವಿಡ್ ದೃಢಪಟ್ಟು, ಈಗ ಚೇತರಿಸಿಕೊಂಡಿದ್ದಾರೆ. ಅವರು ಹೋಂ ಐಸೊಲೇಷನ್ ನಲ್ಲಿದ್ದಾರೆ.

ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಗೆ ಕೋವಿಡ್ ಸೊಂಕು ಇರುವ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ, ಸೋಮವಾರ ಆರು ವಿದ್ಯಾರ್ಥಿಗಳು ಹಾಗೂ ಒಬ್ಬರು ವೈದ್ಯರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಎಲ್ಲರೂ ಹಾಸ್ಟೆಲ್ ವಿದ್ಯಾರ್ಥಿಗಳಾಗಿದ್ದಾರೆ. ಅವರೆಲ್ಲರೂ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರ ಎಂದರು.

ಹಾಸ್ಟೆಲ್ ನಲ್ಲಿ 650 ವಿದ್ಯಾರ್ಥಿಗಳಿದ್ದು, ಎಲ್ಲರ ಆರ್ಟಿಪಿಸಿಆರ್ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಮಂಗಳವಾರಕ್ಕೆ ಎಲ್ಲರ ಪರೀಕ್ಷೆಯೂ ಮುಗಿಯಲಿದೆ. ಕಂಟೈನ್ಮೆಂಟ್ ಝೋನ್ ಮಾಡಲಾಗುವುದು.  ಸೋಂಕು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News