ಡಿ. 4: ಅಂತರ ವೈದ್ಯಕೀಯ ಕಾಲೇಜು ವೈದ್ಯಕೀಯ ರಸ ಪ್ರಶ್ನೆ ಸ್ಪರ್ಧಾಕೂಟ

Update: 2021-11-29 14:41 GMT

ಮಂಗಳೂರು, ನ.29: ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯ ದಲ್ಲಿ ಪದವಿ ಪೂರ್ವ ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ಮೆಡಿಕ್ವಿಝ್- 2021 ಸ್ಪರ್ಧಾಕೂಟವು ಡಿ.4ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ರಾಜ್ಯದ ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರು ಸ್ಪರ್ಧಾಕೂಟದಲ್ಲಿ ಭಾಗವಹಿಸಲು ಆಸಕ್ತಿಯಿರುವ ತಮ್ಮ ಕಾಲೇಜಿನ ವೈದ್ಯಕೀಯ ಶಾಸ್ತ್ರ ವಿಭಾಗದ ಪದವಿ ಪೂರ್ವದ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳನ್ನು ಒಳಗೊಂಡ ತಂಡದ ಹೆಸರುಗಳನ್ನು ನೋಂದಾಯಿಸಬಹುದು.

ಮಾಹಿತಿಗಾಗಿ ಸ್ಪರ್ಧಾಕೂಟದ ಸಂಘಟಕ/ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ದೇವದಾಸ್‌ರೈ (ಮೊ.ಸಂ: 98450 81145) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News