ವಕೀಲರ ಸಂಘದಿಂದ ಪದ್ಮಶ್ರೀ ಪುರಸ್ಕೃತ ಹಾಜಬ್ಬರಿಗೆ ಸನ್ಮಾನ
Update: 2021-11-29 20:14 IST
ಮಂಗಳೂರು, ನ. 29: ಮಂಗಳೂರು ವಕೀಲರ ಸಂಘದ ವಾರ್ಷಿಕೋತ್ಸವ ಇತ್ತೀಚೆಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ನಡೆಯಿತು.
ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಮುರಳಿಧರ ಪೈ ಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಹಾಜಬ್ಬ ಅವರ ಕನಸಿಗೆ ಸಹಕಾರಿಯಾಗುವಂತೆ ವಕೀಲರು ಸಂಗ್ರಹಿಸಿದ ಸುಮಾರು 2 ಲಕ್ಷ ರೂ.ಗಳನ್ನು ಹಸ್ತಾಂತರಿಸಲಾ ಯಿತು. ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಸದಸ್ಯರಿಂದ ರಾಜ್ಯಮಟ್ಟದ ಪ್ರಶಸ್ತಿ ಪಡೆದ ತುಳುನಾಡ ವೈಭವ ಎಂಬುವಂತಹ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಂಡಿತು.ಮಂಗಳೂರು ವಕೀಲರ ಸಂಘದ ವಾರ್ಷಿಕೋತ್ಸವ ದಲ್ಲಿ ನ್ಯಾಯಾಧೀಶರು ಮತ್ತು ವಕೀಲರು ತಮ್ಮ ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು.