ಡಿ.1: ವಿಶ್ವ ಏಡ್ಸ್ ನಿಯಂತ್ರಣ ದಿನಾಚರಣೆ

Update: 2021-11-29 14:45 GMT

ಮಂಗಳೂರು, ನ.29: ದ.ಕ. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್‌ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಸ್ವಯಂ ಸೇವಾ ಸಂಘ ಸಂಸ್ಥೆಗಳು, ಎನ್‌ಎಸ್‌ಎಸ್ ಘಟಕಗಳ ರೆಡ್‌ರಿಬ್ಬನ್ ಕ್ಲಬ್‌ಗಳು ಹಾಗೂ ಬಂಟ್ವಾಳ ಪರಿಸರದ ಹಲವು ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಿ.1ರಂದು ವಿಶ್ವ ಏಡ್ಸ್ ನಿಯಂತ್ರಣ ದಿನಾಚರಣೆ ಕಾರ್ಯಕ್ರಮವು ಮೊಡಂಕಾಪು ಇನ್‌ಫೆಂಟ್ ಜೀಸಸ್ ಚರ್ಚ್ ಸಭಾಂಗಣದಲ್ಲಿ ನಡೆಯಲಿದೆ.

ಅಂದು ಬೆಳಗ್ಗೆ 8 ಗಂಟೆಗೆ ಬಿ.ಸಿ.ರೋಡಿನ ಗುರು ನಾರಾಯಣ ವೃತ್ತದಿಂದ ಮೊಡಂಕಾಪು ಇನ್‌ಫೆಂಟ್ ಜೀಸಸ್ ಚರ್ಚ್‌ವರೆಗೆ ಜಾಥಾ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News