ಆರೋಗ್ಯ ಸುರಕ್ಷಾಧಿಕಾರಿ ತರಬೇತಿಗೆ ಅರ್ಜಿ ಆಹ್ವಾನ

Update: 2021-11-29 14:47 GMT

ಮಂಗಳೂರು, ನ. 29: ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸರಕಾರಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಕಿರಿಯ ಮಹಿಳಾ ಆರೋಗ್ಯ ಸಹಾಯಕಿ) ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಡಿ.10ರಂದು ಸಂಜೆ 5:30ರೊಳಗೆ ದ್ವಿ ಪ್ರತಿಯಲ್ಲಿ ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಕಾರಿಗಳ ಕಚೇರಿಗೆ ಸಲ್ಲಿಸಬಹುದು.

ತರಬೇತಿಗೆ ಸೇರಬಯಸುವ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ಜಿಲ್ಲಾ ತರಬೇತಿ ಕೇಂದ್ರ ಸುರತ್ಕಲ್‌ನ ಪ್ರಾಂಶುಪಾಲರು/ಪ್ರಾಂಶುಪಾಲರು ಸರಕಾರಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದವನ್ನು ಭೇಟಿ ಮಾಡಬಹುದು.

ಮಾಹಿತಿಗಾಗಿ www.karhfw.gov.in ದೂ.ಸಂ: 0824-2423672ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News