ಡಿ.3ರಿಂದ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಸಮೀಕ್ಷೆ

Update: 2021-11-29 16:20 GMT

ಉಡುಪಿ, ನ.29: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗ ದಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಮ್ಯಾನ್ಯುವಲ್ ಸ್ಕ್ಯಾವೆಂಜರ್ ನಿಷೇಧ ಮತ್ತು ಪುನರ್ವಸತಿ ಕಾಯಿದೆ-2013ರಡಿಯಲ್ಲಿ ಜಿಲ್ಲೆಯ 155 ಗ್ರಾಮ ಪಂಚಾಯತ್‌ಗಳಲ್ಲಿ ಡಿ.3ರಿಂದ ಡಿ.8ರವರೆಗೆ ಸಮೀಕ್ಷೆ ಮತ್ತು ಕ್ಯಾಂಪ್ ಆಯೋಜಿಸಲಾಗಿದೆ.

ಒಣ ಶೌಚಾಲಯಗಳನ್ನು ಸ್ವಚ್ಛಗೊಳಿಸುವವರು, ತೆರೆದ ಚರಂಡಿಯಲ್ಲಿ ಸಂಗ್ರಹವಾಗುವ ಮಾನವ ಮಲವನ್ನು ಸ್ವಚ್ಛಗೊಳಿಸು ವವರು ಮತ್ತು ಶೌಚಾಲಯ ಮಲಗುಂಡಿಗಳನ್ನು ದೈಹಿಕವಾಗಿ ಸ್ವಚ್ಛಗೊಳಿಸುವ ವ್ಯಕ್ತಿಗಳು, ಗ್ರಾಪಂಗಳಲ್ಲಿ ಆಯೋಜಿಸಲಾಗಿರುವ ಸಮೀಕ್ಷೆ, ಗುರುತಿಸುವಿಕೆಯ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ.

ಇದರಲ್ಲಿ ಭಾಗವಹಿಸಲು ಇಚ್ಛಿಸುವವರು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಕುಟುಂಬದ ಸದಸ್ಯರನ್ನೊಳಗೊಂಡ ಒಂದು ಭಾವಚಿತ್ರ, ಬ್ಯಾಂಕ್ ಖಾತೆ ಪಾಸ್‌ಬುಕ್‌ನ ಮುಖಪುಟದ ಪ್ರತಿ, ಆಧಾರ್ ಪ್ರತಿ, ಮ್ಯಾನ್ಯುವಲ್ ಸ್ಕ್ಯಾವೆಂಜರ್ ಕಾರ್ಯ ನಿರ್ವಹಿಸುತ್ತಿರುವ ಅನೈರ್ಮಲ್ಯ ಶೌಚಾಯಲದ ಸ್ಥಳದ ವಿವರಗಳನ್ನು ನೀಡಿ ನೋಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಳಿಗೆ ಸಂಬಂಧಿಸಿದ ಗ್ರಾಮ ಪಂಚಾಯತ್ ಕಚೇರಿಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News