ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಅಕ್ರಮ ಆರೋಪ: ಬೆಳಗಾವಿ ಜಿಲ್ಲಾಧಿಕಾರಿಗೆ ಕಾಂಗ್ರೆಸ್ ನಿಯೋಗ ದೂರು
Update: 2021-11-29 22:03 IST
ಬೆಳಗಾವಿ, ನ.29: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಅಭ್ಯರ್ಥಿ ಹಾಗೂ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ, ಅವರ ಸಹೋದರರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಚುನಾವಣೆ ಅಕ್ರಮ ನಡೆಸಲು ಹುನ್ನಾರ ಮಾಡಿರುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು.
ಈ ಸಂಬಂಧ ಚುನಾವಣಾಧಿಕಾರಿಯೂ ಆಗಿರುವ ಬೆಳಗಾವಿ ಜಿಲ್ಲಾಧಿಕಾರಿ ವೆಂಕಟೇಶ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬರೆದಿರುವ ಪತ್ರವನ್ನು ಶಾಸಕ ಎನ್.ಎ.ಹಾರೀಸ್, ಮಾಜಿ ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ, ಬೆಳಗಾವಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಸೇಠ್, ವಿನಯ್ ನವಲಗಟ್ಟಿ ಅವರನ್ನು ಒಳಗೊಂಡ ಕಾಂಗ್ರೆಸ್ ನಿಯೋಗ ಸೋಮವಾರ ಹಸ್ತಾಂತರಿಸಿತು.