ರಾಜ್ಯದಲ್ಲಿಂದು 257 ಮಂದಿಗೆ ಕೊರೋನ ದೃಢ, 5 ಮಂದಿ ಮೃತ್ಯು

Update: 2021-11-29 17:32 GMT

ಬೆಂಗಳೂರು, ನ.29: ರಾಜ್ಯದಲ್ಲಿ ಸೋಮವಾರ 257 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಐವರು ಸೋಂಕಿಗೆ ಬಲಿಯಾಗಿದ್ದು, 205 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,95,857ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,203ಕ್ಕೆ ತಲುಪಿದೆ.        

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 6,878ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಐವರು ಸಾವು: ಬೆಂಗಳೂರು ನಗರ 2, ಕೋಲಾರ 1, ತುಮಕೂರು 1, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 257 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 131, ಚಾಮರಾಜನಗರ 8, ಚಿಕ್ಕಮಗಳೂರು 1, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 11, ಹಾಸನ 21, ಕೊಡಗು 14, ಕೋಲಾರ 2, ಮೈಸೂರು 15, ಶಿವಮೊಗ್ಗ 4, ತುಮಕೂರು 23, ಉಡುಪಿ 7, ಉತ್ತರ ಕನ್ನಡ ಜಿಲ್ಲೆಯಲ್ಲಿ 5 ಪ್ರಕರಣ ಪತ್ತೆಯಾಗಿವೆ. 

ರಾಜಧಾನಿಯಲ್ಲಿ 131 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಸೋಮವಾರದಂದು 131 ಜನರಿಗೆ ಕೊರೋನ ಸೋಂಕು ದೃಢಪಟ್ಟಿವೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದು, ಒಟ್ಟು 12,34,627 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,56,267 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,331 ಜನರು ಸೋಂಕಿಗೆ ಬಲಿಯಾಗಿದ್ದಾರೆ.  

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News