ಮಾನನಷ್ಟ ಪ್ರಕರಣ: ಎನ್‌ಸಿಪಿ ನಾಯಕ ನವಾಬ್ ಮಲಿಕ್‌ಗೆ ಜಾಮೀನು

Update: 2021-11-29 18:28 GMT

ಮುಂಬೈ, ನ. 29: ಮುಂಬೈ ಬಿಜೆಪಿ ಯುವ ಘಟಕದ ಮಾಜಿ ಅಧ್ಯಕ್ಷ ಮೋಹಿತ್ ಕಾಂಬೋಜ್ ಭಾರತೀಯ ದಾಖಲಿಸಿದ ಮಾನನಷ್ಟ ಪ್ರಕರಣದಲ್ಲಿ ಮಹಾರಾಷ್ಟ್ರದ ಸಚಿವ ಹಾಗೂ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ. 15 ಸಾವಿರ ರೂಪಾಯಿ ವೈಯುಕ್ತಿಕ ಬಾಂಡ್ ಆಧಾರದಲ್ಲಿ ಮಝಗಾಂವ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮಲಿಕ್ ಅವರಿಗೆ ಜಾಮೀನು ನೀಡಿತು.

ಕಳೆದ ತಿಂಗಳು ಪ್ರಯಾಣಿಕರ ಹಡಗಿನ ಮೇಲೆ ಎನ್‌ಸಿಬಿ ದಾಳಿ ನಡೆಸಿದ ಬಳಿಕ ತನ್ನ, ಸಹೋದರ ಹಾಗೂ ಭಾವನ ಬಗ್ಗೆ ಮಲಿಕ್ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಭಾರತೀಯ ಸಲ್ಲಿಸಿದ ಕ್ರಿಮಿನಲ್ ಮಾನನಷ್ಟ ಪ್ರಕರಣದ ಕುರಿತಂತೆ ನ್ಯಾಯಾಲಯ ಈ ತಿಂಗಳ ಆರಂಭದಲ್ಲಿ ಮಲಿಕ್ ಅವರಿಗೆ ನೋಟಿಸು ಜಾರಿ ಮಾಡಿತ್ತು ಮೇಲ್ನೋಟಕ್ಕೆ ಮಲಿಕ್ ಹೇಳಿಕೆ ದೂರುದಾರನ ಗೌರವಕ್ಕೆ ಧಕ್ಕೆ ಉಂಟು ಮಾಡಿದೆ ಹಾಗೂ ಭಾರತೀಯ ದಂಡ ಸಂಹಿತಯ ಸೆಕ್ಷನ್ 500ರ ಅಡಿಯಲ್ಲಿ ಅಪರಾಧ ಎಂದು ನ್ಯಾಯಾಲಯ ಹೇಳಿತ್ತು.

ಮುಂಬೈ ಕರಾವಳಿಯಲ್ಲಿ ಪ್ರಯಾಣಿಕರ ಹಡಗಿನ ಮೇಲೆ ಕಳೆದ ತಿಂಗಳು ಎನ್‌ಸಿಬಿ ದಾಳಿ ನಡೆಸಿತ್ತು ಹಾಗೂ ಮಾದಕ ದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರತಿಪಾದಿಸಿತ್ತು. ತರುವಾಯ ಈ ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿ ಶಾರುಕ್ ಖಾನ್ ಅವರ ಪುತ್ರ ಸಹಿತ 20 ಮಂದಿಯನ್ನು ಎನ್‌ಸಿಬಿ ಬಂಧಿಸಿತ್ತು. ಪ್ರಯಾಣಿಕರ ಹಡಗಿನಲ್ಲಿ ಮಾದಕ ದ್ರವ್ಯ ಪತ್ತೆ ಪ್ರಕರಣ ನಕಲಿ ಎಂದು ಮಲಿಕ್ ಅವರು ಮತ್ತೆ ಮತ್ತೆ ಹೇಳಿದ್ದರು. ಅಲ್ಲದೆ, ಎನ್‌ಸಿಬಿಯ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ವಾಂಖೆಡೆ ಈ ಆರೋಪಗಳನ್ನು ನಿರಾಕರಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News