ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Update: 2021-11-30 07:10 GMT
ಫೈಲ್ ಚಿತ್ರ

ಬೆಂಗಳೂರು, ನ.30:  ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದ ಮೇಲೆ‌ ಸಿಸಿಬಿ ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡಿದೆ.

ಮಂಗಳವಾರ ಬೆಳಗ್ಗೆ ಈ ದಾಳಿ‌ ನಡೆದಿದ್ದು, ಪ್ರತಿಯೊಂದು ಬ್ಯಾರಕ್ ಹಾಗೂ ಕೊಠಡಿಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿಚಾರಣಾಧೀನ ಕೈದಿಗಳು, ಜೈಲಿನಲ್ಲಿ ಅಕ್ರಮ ಚಟುವಟಿಕೆ‌ ನಡೆಸುತ್ತಿರುವ ಬಗ್ಗೆ ಮಾಹಿತಿ‌. ಮೊಬೈಲ್ ಬಳಸುತ್ತಿದ್ದ ಹಾಗೂ ಡ್ರಗ್ಸ್ ಸೇವಿಸುತ್ತಿದ್ದ ಆರೋಪ ಹಿನ್ನೆಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ‌ ಮಾಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News