ಪ್ರಧಾನಿ ಮೋದಿ - ಎಚ್ .ಡಿ ದೇವೇಗೌಡ ಭೇಟಿ

Update: 2021-11-30 10:14 GMT
photo: twitter@H_D_Devegowda
 

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ದೇವೇಗೌಡರ ಭೇಟಿಯ ಕುರಿತು ಫೋಟೊಗಳನ್ನು ಹಂಚಿಕೊಂಡಿದ್ದು,  ಸಂಸತ್​ನಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಇಂದು ಭೇಟಿಯಾದೆ ಎಂದು ತಿಳಿಸಿದ್ದಾರೆ. 

ಸಂಸತ್ ಅಧಿವೇಶನದ ಎರಡನೇ ದಿನವಾದ ಇಂದು ಉಭಯ ನಾಯಕರ ಭೇಟಿ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News