ದ.ಕ.ಜಿಲ್ಲಾದ್ಯಂತ ಭಾರೀ ಮಳೆ ಸುರಿಯುವ ಸಾಧ್ಯತೆ : ಹವಾಮಾನ ಇಲಾಖೆ

Update: 2021-11-30 13:48 GMT
ಸಾಂದರ್ಭಿಕ ಚಿತ್ರ

ಮಂಗಳೂರು, ನ.30: ಅರಬ್ಬಿ ಸಮುದ್ರದ ಪೂರ್ವ ಮಧ್ಯ ಭಾಗದಲ್ಲಿ ಕಾಣಿಸಿಕೊಂಡ ಹವಾಮಾನ ವೈಪರಿತ್ಯದಿಂದ ದ.ಕ. ಜಿಲ್ಲೆಯಲ್ಲಿ ಮಂಗಳವಾರ ಸಂಜೆಯ ಬಳಿಕ ಉತ್ತಮ ಮಳೆಯಾಗಿದೆ. ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಮಂಗಳವಾರ ಸಂಜೆಯವರೆಗೂ ಮೋಡ ಕವಿದ ವಾತಾವರಣ ಕಂಡು ಬಂದಿತ್ತು. ಸಂಜೆಯ ವೇಳೆಗೆ ದಟ್ಟವಾದ ಮೋಡಗಳು ಆವೃತಗೊಂಡು ಮಳೆ ಸುರಿಯಲಾರಂಭಿಸಿತು.

ಜಿಲ್ಲೆಯ ಮಂಗಳೂರು ನಗರ ಮತ್ತು ಗ್ರಾಮಾಂತರ, ಬೆಳ್ತಂಗಡಿ, ಕಡಬ, ಪುತ್ತೂರು, ಬಂಟ್ವಾಳ, ಸುಳ್ಯ ತಾಲೂಕುಗಳ ವಿವಿಧೆಡೆ ಗುಡುಗು ಮಿಂಚು ಸಹಿತ ಗಾಳಿ ಮಳೆಯಾಗಿದೆ. ಸೋಮವಾರ ರಾತ್ರಿಯೂ ಗುಡುಗು ಸಹಿತ ಭಾರಿ ಮಳೆಯಾಗಿದೆ. ಮಂಗಳೂರಿನಲ್ಲಿ ಮಂಗಳವಾರ ಗರಿಷ್ಠ ತಾಪಮಾನ 31.8 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 23.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಬುಧವಾರ ದ.ಕ.ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗುಡುಗು ಸಹಿತ ಮಳೆ ಸುರಿಯುಲಿದೆ ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಗೆ ಹೊಂದಿಕೊಂಡಂತೆ ಸಮುದ್ರದಲ್ಲಿ ಗಂಟೆಗೆ 40-50 ಕಿ.ಮೀ.ನಿಂದ 60 ಕಿ.ಮೀ.ವರೆಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಹಾಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News