ಅಖಿಲೇಶ್ ವಿರುದ್ಧ ಮಾನಹಾನಿಕರ ಪೋಸ್ಟ್: ಫೇಸ್‌ಬುಕ್ ಸಿಇಒ ಝುಕರ್‌ಬರ್ಗ್ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

Update: 2021-12-01 10:13 GMT
 ಅಖಿಲೇಶ್ ಯಾದವ್ 

ಕನೌಜ್: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ನ್ಯಾಯಾಲಯದ ಆದೇಶದ ಮೇರೆಗೆ ಫೇಸ್‌ಬುಕ್ ಸಿಇಒ ಮಾರ್ಕ್ ಝುಕರ್‌ಬರ್ಗ್ ಹಾಗೂ ಇತರ 49 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

"ತನಿಖೆಯ ಸಮಯದಲ್ಲಿ ಝುಕರ್‌ಬರ್ಗ್ ಅವರ ಹೆಸರನ್ನು ಕೈಬಿಡಲಾಗಿದೆ. (ಫೇಸ್‌ಬುಕ್) ಪುಟದ ನಿರ್ವಾಹಕರ ವಿರುದ್ಧ ತನಿಖೆ ನಡೆಯುತ್ತಿದೆ" ಎಂದು ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಸರಹತಿ ಗ್ರಾಮದ ನಿವಾಸಿ ಅಮಿತ್ ಕುಮಾರ್ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸುವಂತೆ ಮುಖ್ಯ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಧರಂವೀರ್ ಸಿಂಗ್ ಸೋಮವಾರ ಪೊಲೀಸರಿಗೆ ಸೂಚಿಸಿದ್ದಾರೆ.

ನ್ಯಾಯಾಲಯದ ಆದೇಶದ ನಂತರ  ಥಾಟಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ (ಎಸ್‌ಎಚ್‌ಒ) ಪ್ರಯಾಗ್ ನಾರಾಯಣ ಬಾಜ್‌ಪೇಯಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News