×
Ad

ಮಂಗಳೂರು; ಬ್ಯಾಟರಿ ಕಳವು ಪ್ರಕರಣ: ಇಬ್ಬರ ಸೆರೆ, ಸೊತ್ತು ವಶ

Update: 2021-12-01 16:50 IST

ಮಂಗಳೂರು: ಲಾರಿಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಇಬ್ಬರನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದು, 2.70 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕಡಬ ತಾಲೂಕಿನ ಕುಂತ್ತೂರು ಪೆರಬೆಯ ರಾಜೇಶ್ ಕೆ (27), ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಸಿನಾನ್ (24) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ. 

ಇತ್ತೀಚೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣವೊಂದು ದಾಖಲಾಗಿತ್ತು.ಮಹಮ್ಮದ್ ಶರೀಫ್ ಎಂಬವರು ಕುರ್ನಾಡು ಮಿತ್ತಕೋಡಿ ಎಂಬಲ್ಲಿರುವ ಸೈಟ್‌ನಲ್ಲಿ ನಿಲ್ಲಿಸಿದ್ದ ಲಾರಿ, ಹಿಟಾಚಿ ಮತು ಜೆಸಿಬಿಗಳ 7 ಬ್ಯಾಟರಿಗಳನ್ನು ಕಳವು ಮಾಡಲಾಗಿತ್ತು. ಬುಧವಾರ ಆರೋಪಿಗಳು ಟಾಟಾ ಏಸ್ ವಾಹನದಲ್ಲಿ 10 ಬ್ಯಾಟರಿಗಳನ್ನು ಮಾರಾಟ ಮಾಡಲು ತೆರಳುತ್ತಿದ್ದಾರೆ ಎಂಬ ಮಾಹಿತಿ ಕೊಣಾಜೆ ಪೊಲೀಸರಿಗೆ ಲಭ್ಯವಾಗಿತ್ತು. ಈ ನಿಟ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಬಾಳೆಪುಣಿ ಗ್ರಾಮದ ಸುಟ್ಪಾಡಿ ಕ್ರಾಸ್ ಬಳಿ ಟಾಟಾ ಏಸ್ ವಾಹನವನ್ನು ತಡೆದು ನಿಲ್ಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News