×
Ad

ಕಂದಾವರ: ಗ್ರಾಪಂ ಪಿಡಿಒಗೆ ಹಲ್ಲೆ ಖಂಡಿಸಿ ಪ್ರತಿಭಟನೆ

Update: 2021-12-01 19:23 IST

ಮಂಗಳೂರು, ಡಿ.1: ಕಂದಾವರ ಗ್ರಾಪಂ ಪಿಡಿಒ ಮೇಲೆ ಗ್ರಾಪಂ ಅಧ್ಯಕ್ಷರು ಮಂಗಳವಾರ ಹಲ್ಲೆ ನಡೆಸಿದ್ದನ್ನು ಖಂಡಿಸಿ ಪಂಚಾ ಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ವತಿಯಿಂದ ದ.ಕ.ಜಿಪಂ ಕಚೇರಿಯ ಮುಂದೆ ಬುಧವಾರ ಪ್ರತಿಭಟನೆ ನಡೆಸಲಾಯಿತು,

ಕಂದಾವರ ಗ್ರಾಪಂ ಕಚೇರಿಯಲ್ಲೇ ಅಧ್ಯಕ್ಷ ಉಮೇಶ್ ಮೂಲ್ಯರು ಪಿಡಿಒ ಯಶವಂತ ಬೆಳ್ಚಡರಿಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರೂ ಕೂಡ ರಾಜಕೀಯ ಒತ್ತಡಕ್ಕೆ ಮಣಿದು ಇನ್ನೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಜಿಪಂ ಸಿಇಒ ಡಾ.ಕುಮಾರ್ ಸೂಕ್ತ ಕ್ರಮದ ಭರವಸೆ ನೀಡಿದರು. ಬಳಿಕ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಮುಖಂಡರ ನಿಯೋಗವು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಪ್ರಕರಣ ದಾಖಲಿಸಲು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ಅದ್ಯಕ್ಷ ನಾಗೇಶ್ ಎಂ., ಪದಾಧಿಕಾರಿಗಳಾದ ಅವಿನಾಶ್, ವಿಲ್ಪ್ರೆಡ್ ಡಿಸೋಜ, ಶಂಭುಶರ್ಮ, ಪೂರ್ಣಿಮಾ, ದ.ಕ.ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಪಿ.ಸಿ. ಕೃಷ್ಣಪ್ಪ, ಉಡುಪಿ ಜಿಲ್ಲಾ ನೌಕರರ ಸಂಘದ ಅಧ್ಕ್ಷ ಅಂಪಾರು ದಿನಕರ ಶೆಟ್ಟಿ, ದ.ಕ.ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News