ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
Update: 2021-12-01 20:34 IST
ಮಂಗಳೂರು, ಡಿ.1: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿ.15ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಪ್ರಿಂಟ್ ಪ್ರತಿಯನ್ನು ನಮೂದಿಸಿದ ಎಲ್ಲಾ ದಾಖಲೆಯೊಂದಿಗೆ ಒಂದು ಪ್ರತಿಯನ್ನು ಶಾಲೆಯ ಮುಖ್ಯ ಶಿಕ್ಷಕರಿಗೆ ಸಲ್ಲಿಸಬೇಕು.
ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನವನ್ನು ಆನ್‌ಲೈನ್‌ನಲ್ಲಿ ಸಲ್ಲಿಸಿದ ನಂತರ ಅರ್ಜಿಯ ಒಂದು ಪ್ರತಿಯನ್ನು ಪ್ರಿಂಟ್ ಪಡೆದು ನಮೂದಿಸಿದ ದಾಖಲೆಯೊಂದಿಗೆ ಕಾಲೇಜಿನ ಪ್ರಾಂಶುಪಾಲರಿಗೆ ಸಲ್ಲಿಸಬೇಕು.
ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿ ವೇತನದ ಪ್ರತಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಅಥವಾ ತಾಲೂಕು ಮಾಹಿತಿ ಕೇಂದ್ರಕ್ಕೆ ಸಲ್ಲಿಸುವ ಅಗತ್ಯವಿರುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.