ನಿಗದಿತ ಕಾಲಮಿತಿಯೊಳಗೆ ಪೊಲೀಸ್ ಖಾಲಿ ಹುದ್ದೆಗಳ ಭರ್ತಿ

Update: 2021-12-01 16:44 GMT

ಬೆಂಗಳೂರು, ಡಿ.1: ರಾಜ್ಯದಲ್ಲಿ ಖಾಲಿ ಇರುವ 1,142 ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಹಾಗೂ 4 ಸಾವಿರ ಪೊಲೀಸ್ ಕಾನ್‍ಸ್ಟೆಬಲ್‍ಗಳ ಹುದ್ದೆಗಳನ್ನು ನಿಗದಿತ ಕಾಲಮಿತಿಯೊಳಗೆ ಭರ್ತಿ ಮಾಡಲಾಗುವುದು ಎಂದು ಹೈಕೋರ್ಟ್‍ಗೆ ಸರಕಾರ ಭರವಸೆ ನೀಡಿದೆ. 

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರಕಾರಕ್ಕೆ ನಿರ್ದೇಶನ ನೀಡಲು ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. 

ಸರಕಾರದ ಪರ ವಕೀಲರು ಪ್ರಮಾಣಪತ್ರ ಸಲ್ಲಿಸಿ, ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ವಿವರಗಳ ಬಗ್ಗೆ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. ಖಾಲಿ ಹುದ್ದೆಗಳನ್ನು ನಿಗದಿತ ಕಾಲಮಿತಿಯೊಳಗೆ ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News