×
Ad

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Update: 2021-12-01 22:16 IST

ಮಂಗಳೂರು, ಡಿ.1: ಸರಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ದೊರಕದ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿ (ಬೌದ್ಧ, ಕ್ರಿಶ್ಚಿಯನ್, ಜೈನ್, ಮುಸ್ಲಿಂ, ಪಾರ್ಸಿ ಮತ್ತು ಸಿಖ್)ಗಳ ವಿದ್ಯಾಭ್ಯಾಸವನ್ನು ಮುಂದುವರಿಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯ ನೀಡಲು ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ.

ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5 ಕಿ.ಮಿ.ದೂರದಲ್ಲಿರಬೇಕು. ಒಂದೇ ನಗರದ ವ್ಯಾಪ್ತಿಯಲ್ಲಿರುವವರು ಅರ್ಹರಿರುವುದಿಲ್ಲ. ಅರ್ಜಿಯನ್ನು ಸೇವಾಸಿಂಧು ಆನ್‌ಲೈನ್ ಮೂಲಕ ಭರ್ತಿ ಮಾಡಿ ದೃಢೀಕೃತ ದಾಖಲಾತಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ, ಮೌಲಾನಾ ಆಝಾದ್ ಭವನ, ಪಾಂಡೇಶ್ವರ ಓಲ್ಡ್‌ಕೆಂಟ್‌ರಸ್ತೆ, ಮಂಗಳೂರು, ಈ ವಿಳಾಸಕ್ಕೆ ಡಿ.31ರೊಳಗೆ ಸಲ್ಲಿಸಬೇಕು. ಅರ್ಜಿಯನ್ನು ಇಲಾಖಾ ವೆಬ್‌ಸೈಟ್
() ಲಿಂಕ್ ಮೂಲಕ ಸಲ್ಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News