‘ಕನ್ನಡ ನುಡಿ ಕಲಿಕೆ ಪಾಠಗಳ' ಲಿಂಕ್ ಲೋಕಾರ್ಪಣೆ

Update: 2021-12-01 16:51 GMT

ಬೆಂಗಳೂರು, ಡಿ. 1: ‘ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ರೂಪಿಸಲಾದ ‘ಕನ್ನಡ ನುಡಿ ಕಲಿಕೆ ಪಾಠಗಳ' ಲಿಂಕ್ ಅನ್ನು ಕನ್ನಡ ಮತ್ತು ಸಂಸ್ಕøತಿ ಹಾಗೂ ಇಂಧನ ಇಲಾಖೆ ಸಚಿವ ಸುನೀಲ್ ಕುಮಾರ್ ಅವರು ಬುಧವಾರ ಲೋಕಾರ್ಪಣೆ ಮಾಡಿದರು.

ವಿಧಾನಸೌಧದಲ್ಲಿನ ತಮ್ಮ ಕಚೇರಿಯಲ್ಲಿ ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಸಚಿವ ಸುನೀಲ್ ಕುಮಾರ್, ‘ಕನ್ನಡ ಭಾಷೆಯನ್ನು ಬೆಳೆಸುವ ಉದ್ದೇಶದಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿಶೇಷ ಅಭಿಯಾನಗಳನ್ನು ರೂಪಿಸಿ ನಡೆಸಿದೆ. ಕನ್ನಡದ ಮೇಲೆ ಆಸಕ್ತಿ ಇರುವ ಅನ್ಯಭಾಷಿಕರಿಗೆ ಹಾಗೂ ಬೆಂಗಳೂರಿನಲ್ಲಿ ನೆಲೆಸಿರುವ ಕನ್ನಡೇತರರಿಗೆ ಕನ್ನಡ ಕಲಿಸುವ ಉದ್ದೇಶದಿಂದ ಕನ್ನಡ ನುಡಿ ಕಲಿಕೆ ಪಾಠಗಳು ವಿಶೇಷ ಅಭಿಯಾನವನ್ನು ಪ್ರಾಧಿಕಾರ ರೂಪಿಸಿದೆ ಎಂದರು.

‘ಕನ್ನಡ ನುಡಿ ಕಲಿಕೆ ಪಾಠಗಳ ಮೂಲಕ ರಾಜ್ಯದಲ್ಲಿ ನೆಲೆಸಿರುವ ಅನ್ಯಭಾಷಿಕರು ಕನ್ನಡವನ್ನು ಕಲಿತು ಬಳಸುವಂತಾಗಲಿ. ಆ ಮೂಲಕ ಕನ್ನಡದ ಕಂಪು ಜಗತ್ತಿನಾದ್ಯಂತ ಪಸರಿಸುವಂತಾಗಲಿ ಎಂದ ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಈ ಕಾರ್ಯ ಯಶಸ್ವಿಯಾಗಿ ನಡೆಯಲಿ ಎಂದು ಅವರು, ಕನ್ನಡ ನುಡಿ ಕಲಿಕೆ ಪಾಠಗಳು ಸದ್ಯದಲ್ಲಿಯೇ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಲಾಗುವುದು. ಮೊದಲಿಗೆ ಪಾಠ-1 ಮತ್ತು ಪಾಠ-2 ಅನ್ನು ಅಪ್‍ಲೋಡ್ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಉಳಿದ ಪಾಠಗಳನ್ನು ಅಪ್‍ಲೋಡ್ ಮಾಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಹಾಗೂ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News