ಡಿಸೆಂಬರ್‌ನಿಂದ ಫೆಬ್ರವರಿ ವರೆಗೆ 6 ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆ ಸಾಧ್ಯತೆ: ಐಎಂಡಿ

Update: 2021-12-01 18:20 GMT

ಹೊಸದಿಲ್ಲಿ, ಡಿ.1: ಆಂಧ್ರಪ್ರದೇಶದ ಕರಾವಳಿ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು, ಪಾಂಡಿಚೇರಿಯ ಒಳನಾಡು ಹಾಗೂ ಕೇರಳದಲ್ಲಿ ಡಿಸೆಂಬರ್‌ನಿಂದ ಫೆಬ್ರವರಿ ವರೆಗೆ ಸಾಮಾನ್ಯಕ್ಕಿಂತ ಅಧಿಕ ಮಳೆ ಬೀಳಲಿದೆ ಎಂದು ಭಾರತದ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ‘‘ಉತ್ತರ, ಪಶ್ಚಿಮ ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆ ಬೀಳಲಿದೆ ಎಂದು ನಿರೀಕ್ಷಿಸಲಾಗಿದೆ ಆದುದರಿಂದ ಅಲ್ಲಿನ ಸರಾಸರಿ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚು ಇರುವ ನಿರೀಕ್ಷೆ ಇದೆ’’ ಎಂದು ಐಎಂಡಿ ಹೇಳಿದೆ. ‘‘ಪಂಜಾಬ್, ಹರ್ಯಾಣ ಹಾಗೂ ಪಶ್ಚಿಮ ರಾಜಸ್ಥಾನದಲ್ಲಿ ಸಾಮಾನ್ಯ ಸರಾಸರಿ ಉಷ್ಣಾಂಶ ಇರಲಿದೆ ಎಂದು ನಿರೀಕ್ಷಿಸಲಾಗಿದೆ’’ ಎಂದು ಅದು ಹೇಳಿದೆ. ‘‘ಪೂರ್ವ ಹಾಗೂ ಪಶ್ಚಿಮ ಉತ್ತರಪ್ರದೇಶ, ಮಧ್ಯಪ್ರದೇಶ, ಪೂರ್ವ ರಾಜಸ್ಥಾನ ಹಾಗೂ ಗುಜರಾತ್‌ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಹಾಗೂ ಕಡಿಮೆ ಉಷ್ಣಾಂಶ ಇರಲಿದೆ ಎಂದು ಹೇಳುವುದು ಕಷ್ಟ. ಆದರೆ, ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ ಎಂದು ನಿರೀಕ್ಷಿಸಲಾಗಿದೆ’’ ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News