ಉನ್ನತ ಮಟ್ಟದ ತನಿಖೆ ಬಗ್ಗೆ ಪ್ರಾಥಮಿಕ ತನಿಖೆ ಬಳಿಕ ತೀರ್ಮಾನ: ಸಿಎಂ ಬೊಮ್ಮಾಯಿ

Update: 2021-12-02 06:12 GMT

ಬೆಂಗಳೂರು, ಡಿ.2: ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿರುವ ವಿಚಾರವಾಗಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆ ಬಳಿಕ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಾರೆ. ಈ ಬಗ್ಗೆ ನಮ್ಮದೇನು ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಬಳಿಕ ಕಾನೂನು ಪ್ರಕಾರ ಅವರು ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಪ್ರಕರಣದ ಉನ್ನತ ಮಟ್ಟದ ತನಿಖೆಗೆ ವಿಶ್ವನಾಥ್ ಆಗ್ರಹಿಸಿರುವ ಬಗ್ಗೆ ಮಾಧ್ಯಮದವರು ಗಮನಸೆಳೆದಾಗ ಪ್ರತಿಕ್ರಿಯಿಸಿದ ಸಿಎಂ, ಪ್ರಾಥಮಿಕ ತನಿಖೆಯ ಬಳಿಕವಷ್ಟೇ ಆ ಬಗ್ಗೆ ನಿರ್ಧರಿಸಲಾಗುವುದು ಎಂದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News