ಪುದು ಮಾಪ್ಲ ಶಾಲೆಯ ನಿವೃತ್ತ ಶಿಕ್ಷಕಿಗೆ ಬೀಳ್ಕೊಡುಗೆ

Update: 2021-12-02 10:51 GMT

ಬಂಟ್ವಾಳ, ಡಿ.2: ವಿದ್ಯಾರ್ಥಿಗಳಲ್ಲಿ ಉತ್ತಮ ಜೀವನ ರೂಪಿಸಿ ಸುಶಿಕ್ಷಿತ ಸಮಾಜವನ್ನು ನಿರ್ಮಿಸುವ ಮೂಲಕ ದೇಶದ ಅಭಿವೃದ್ಧಿಗೆ ಶಿಕ್ಷಕರು ನೀಡುತ್ತಿರುವ ಪಾತ್ರ ಮಹತ್ತರವಾದದ್ದು ಎಂದು ಟುಡೇ ಫೌಂಡೇಶನ್ ಅಧ್ಯಕ್ಷ ಎಫ್.ಉಮರ್ ಫಾರೂಕ್ ಫರಂಗಿಪೇಟೆ ಹೇಳಿದ್ದಾರೆ.

ಪುದು ಮಾಪ್ಲದ ದ.ಕ. ಜಿ.ಪಂ. ಹಿ.ಪ್ರಾ. ಶಾಲೆಯಲ್ಲಿ ನಿವೃತ್ತಿ ಹೊಂದುತ್ತಿರುವ ಸಹ ಶಿಕ್ಷಕಿ ಬಿ.ಪ್ರಭಾವತಿಯವರಿಗೆ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. 

ಸಭೆಯ ಅಧ್ಯಕ್ಷತೆ ವಹಿಸಿದ್ದ ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮಾತನಾಡಿ, ನಿವೃತ್ತಿ ಬಳಿಕವೂ ಶಿಕ್ಷಕರು ತಾವು ಕಾರ್ಯನಿರ್ವಹಿಸಿದ ಶಾಲೆಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಬದುಕಿನ ಬಗ್ಗೆ ಸಲಹೆಗಳನ್ನು ನೀಡಬೇಕು ಎಂದರು.

ಸಮಾರಂಭದಲ್ಲಿ ನಿವೃತ್ತ ಶಿಕ್ಷಕಿ ಬಿ.ಪ್ರಭಾವತಿಯವರನ್ನು ಸನ್ಮಾನಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಮ್ಲಾನ್ ಕುಂಪನಮಜಲು, ಸದಸ್ಯರಾದ ಹನೀಫ್ ಅಮೆಮಾರ್, ಇರ್ಫಾನ್ ವಳಚ್ಚಿಲ್, ಟುಡೆ ಫೌಂಡೇಶನ್ ಸದಸ್ಯರಾದ ಮಜೀದ್ ಫರಂಗಿಪೇಟೆ, ಅಬೂಬಕರ್ ಫರಂಗಿಪೇಟೆ, ಪುದು ಗ್ರಾಪಂ ಸದಸ್ಯ ಮುಹಮ್ಮದ್ ಮೋನು ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಶಕುಂತಲಾ ಉಲ್ಲಾಳ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಹ ಶಿಕ್ಷಕಿ ಸುನೀತಾ ವಂದಿಸಿದರು. ಶಿಕ್ಷಕಿ ಶಾಲೆಟ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News