ಸ್ಥಳೀಯಾಡಳಿತ ಚುನಾವಣೆಗೆ ಆಪ್ ಸಿದ್ಧತೆ: ರಾಜೇಂದ್ರ ಕುಮಾರ್

Update: 2021-12-02 13:17 GMT

ಮಂಗಳೂರು, ಡಿ.2: ಮುಂಬರುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಚುನಾವಣೆ ಎದುರಿಸಲು ಪಕ್ಷ ಸಿದ್ಧತೆ ಆರಂಭಿಸಿದೆ ಎಂದು ಪಕ್ಷದ ಜಿಲ್ಲಾ ಸಂಚಾಲಕ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನತೆ ಪ್ರಸ್ತುತ ರಾಜಕೀಯ ವ್ಯವಸ್ಥೆಯಲ್ಲಿ ನಂಬಿಕೆ ಕಳೆದುಕೊಂಡಿದ್ದಾರೆ. ಮತ್ತು ಪರ್ಯಾಯ ವ್ಯವಸ್ಥೆಗಾಗಿ ಕಾಯುತ್ತಿದ್ದಾರೆ. ಆಮ್‌ಆದ್ಮಿ ಪಕ್ಷವು ಜನರ ಆಶೋತ್ತರಗಳಿಗೆ ಸ್ಪಂದಿಸಲಿದ್ದು, ಇದನ್ನು ಜನತೆ ಮನಗಂಡಿದ್ದಾರೆ ಎಂದರು.

ಆಮ್ ಆದ್ಮಿ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಿದೆ. ಇತ್ತೀಚಿನ ದಿನಗಳಲ್ಲಿ ಆಪ್ ಭರವಸೆಯ ಪಕ್ಷವಾಗಿ ಹೊರಹೊಮ್ಮುತ್ತಿದೆ. ಸಾರ್ವಜನಿಕ ಆಡಳಿತದಲ್ಲಿ ಪಾದರ್ಶಕತೆ ತರಲು ನಮ್ಮನ್ನು ಬೆಂಬಲಿಸಬೇಕಿದೆ. ವಿಟ್ಲ, ಕೋಟೆಕಾರ್, ಬಜ್ಪೆ, ಕಿನ್ನಿಗೋಳಿ ಮತ್ತಿತರ ಸ್ಥಳೀಯಾಡಳಿತ ಚುನಾವಣೆಯಲ್ಲಿ ಆಪ್ ಸ್ಪರ್ಧೆಯೊಡ್ಡಲಿದೆ. ವಾರ್ಡ್ ಮಟ್ಟದಲ್ಲಿ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಸಾರ್ವಜನಿಕರ ಆರೋಗ್ಯ, ಶಿಕ್ಷಣ, ಆಡಳಿತದಲ್ಲಿ ಪಾರದರ್ಶಕತೆ ತರುವುದು ನಮ್ಮ ಉದ್ದೇಶ ಎಂದವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಬಜ್ಪೆ ವಿಭಾಗದ ಮುಖ್ಯಸ್ಥ ರಾಬರ್ಟ್ ್ರಾಂಕ್ಲಿನ್ ರೇಗೊ, ವೈಟಸ್ ೆರ್ನಾಂಡಿಸ್, ಸದಸ್ಯ ಪ್ರಾಂಕ್ಲಿ ಡಿಸೋಜಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News