ಒಮೈಕ್ರಾನ್ ಪ್ರಕರಣ ಪತ್ತೆ: ಆತಂಕ ಪಡುವ ಅಗತ್ಯ ಇಲ್ಲ, ಮುಂಜಾಗ್ರತೆ ವಹಿಸಿ; ಸಚಿವ ಡಾ.ಸುಧಾಕರ್

Update: 2021-12-02 14:55 GMT

ಬೆಂಗಳೂರು: ಕರ್ನಾಟಕದಲ್ಲಿ ಒಮೈಕ್ರಾನ್ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಆರೋಗ್ಯ ಸಚಿವ ಡಾ.ಸುಧಾಕರ್ ಮನವಿ ಮಾಡಿದ್ದಾರೆ. 

ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಅವರು, ಅಗ್ರೆಸ್ಸಿವ್ ಟೆಸ್ಟ್ ನಿಂದ ರಾಜ್ಯದಲ್ಲಿ ವೇಗವಾಗಿ ಪತ್ತೆ ಹಚ್ಚಿದ್ದೇವೆ ಎಂದು ತಿಳಿಸಿದರು. 

46 ವರ್ಷದ ವೈದ್ಯರೊಬ್ಬರಲ್ಲಿ ಈ ವೈರಾಣು ಕಂಡುಬಂದಿದೆ. ಅವರಿಗೆ ಪಾಸಿಟಿವ್ ಆಗಿದ್ದು, ಅದೇ ದಿನ ಸ್ವಯಂ ಐಸೋಲೇಟ್ ಆಗಿದ್ದಾರೆ. ಅವರಲ್ಲಿ ವೈರಾಣು ಲೋಡ್ ಅಧಿಕವಾಗಿದೆ. ಆದರೆ ಇವರಿಗೆ ಯಾವುದೇ ಪ್ರಯಾಣದ ಇತಿಹಾಸ ಇಲ್ಲ. ಅವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪರೀಕ್ಷಿಸಿದ್ದು, 5 ಮಂದಿಯ ವರದಿ ಪಾಸಿಟಿವ್ ಬಂದಿದೆ. ಒಟ್ಟು ಆರು ಮಂದಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಮೇಲೆ ನಿರಂತರ ನಿಗಾ ಇರಿಸಿದ್ದು, ಯಾರಿಗೂ ಹೆಚ್ಚು ಸಮಸ್ಯೆಯಾಗಿಲ್ಲ ಎಂದು ತಿಳಿಸಿದರು.

 ರಾಜ್ಯದಲ್ಲಿ ಮುಂಜಾಗ್ರತೆ ಕ್ರಮಗಳು ಕೈಗೊಳ್ಳುವ ಬಗ್ಗೆ ನಾಳೆ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಸಭೆ ನಡೆಸಲಿದ್ದೇವೆ ಎಂದರು.

ಎರಡು ಡೋಸ್ ಗಳನ್ನು ಕಡ್ಡಾಯವಾಗಿ ಪಡೆಯಿರಿ, ಹೆಚ್ಚು ಜನ ಸೇರುವ ಸಭೆ ಸಮಾರಂಭಗಳಿಂದ ದೂರವಿರಿ, ಮಾಸ್ಕ್ ಕಡ್ಡಾಯವಾಗಿ ಧರಿಸಿ ಎಂದು ಇದೇ ಸಂದರ್ಭದಲ್ಲಿ ಸಚಿವರು ಮನವಿ ಮಾಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News