ಎಸ್ಕೆಎಸ್ಸೆಸ್ಸೆಫ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Update: 2021-12-02 14:35 GMT

ಮಂಗಳೂರು, ಡಿ.2: ರಾಜಿಯಾಗದ ಸ್ವಾಭಿಮಾನ ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ಎಸ್ಕೆಎಸ್ಸೆಸ್ಸೆಫ್ ಸದಸ್ಯತ್ವದ ದ.ಕ.ಜಿಲ್ಲಾ ಮಟ್ಟದ ಅಭಿಯಾನಕ್ಕೆ ಗುರುವಾರ ಬಿ.ಸಿ.ರೋಡಿನ ಮಿತ್ತಬೈಲಿನಲ್ಲಿ ಚಾಲನೆ ನೀಡಲಾಯಿತು.

ಮಿತ್ತಬೈಲು ಜಬ್ಬಾರ್ ಉಸ್ತಾದ್‌ರ ಖಬರ್ ಝಿಯಾರತ್‌ನೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಚಾಪಳ್ಳ ಮಖಾಶಿಫುಲ್ ಖುಲೂಬ್ ದರ್ಸ್ ವಿದ್ಯಾರ್ಥಿ ಹಾಫಿಝ್ ಸಯ್ಯಿದ್ ಹಸನ್ ಅಲ್-ಹಾದಿ ತಂಙಳ್‌ರಿಂದ ಸದಸ್ಯತ್ವಕ್ಕಾಗಿ ಸಲ್ಲಿಸಿದ ಅರ್ಜಿಯನ್ನು ಎಸ್ಕೆಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಸಯ್ಯಿದ್ ಅಮೀರ್ ತಂಙಳ್ ಕಿನ್ಯ ಸ್ವೀಕರಿಸಿದರು.

ಮಿತ್ತಬೈಲು ಮುಹಿಯುದ್ದೀನ್ ಜುಮಾ ಮಸೀದಿಯ ಖತೀಬ್, ಎಸ್ಕೆಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಅಶ್ರಫ್ ಫೈಝಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದ.ಕ.ಜಿಲ್ಲಾ ಜಂ-ಇಯ್ಯತುಲ್ ಖುತಬಾದ ಪ್ರಧಾನ ಕಾರ್ಯದರ್ಶಿ ಕುಕ್ಕಿಲ ಅಬ್ದುಲ್ ಖಾದರ್ ದಾರಿಮಿ ಮತ್ತು ಎಸ್ಕೆಎಸ್ಸೆಸ್ಸೆಫ್ ಕೇಂದ್ರ ಸಮಿತಿಯ ಕಾರ್ಯದರ್ಶಿ ಖಾಸಿಂ ದಾರಿಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಸ್ಕೆಎಸೆಸ್ಸೆಸ್ಸೆಫ್ ಜಿಲ್ಲಾ ಉಪಾಧ್ಯಕ್ಷರಾದ ತಾಜುದ್ದೀನ್ ರಹ್ಮಾನಿ, ಅಬುಸ್ವಾಲಿಹ್ ಫೈಝಿ, ಸಿದ್ದೀಕ್ ಅಬ್ದುಲ್ ಖಾದರ್, ಮಿತ್ತಬೈಲ್ ಮುದರ್ರಿಸ್ ಉಮರುಲ್ ಫಾರೂಕ್ ಫೈಝಿ, ಜಾಬಿರ್ ಫೈಝಿ ಬನಾರಿ, ರಷೀದ್ ರಹ್ಮಾನಿ, ಬಂಟ್ವಾಳ ವಲಯ ಅಧ್ಯಕ್ಷ ಇರ್ಷಾದ್ ದಾರಿಮಿ. ಅಬೂಬಕರ್ ಸಿದ್ದೀಕ್ ದಾರಿಮಿ ಭಾಗವಹಿಸಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಯಮಾನಿ ಸ್ವಾಗತಿಸಿದರು. ವರ್ಕಿಂಗ್ ಕಾರ್ಯದರ್ಶಿ ಆರಿಫ್ ಬಡಕಬೈಲ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News