ಹೊಳೆಗೆ ಬಿದ್ದು ಮಹಿಳೆ ಮೃತ್ಯು

Update: 2021-12-02 14:58 GMT

ಬೈಂದೂರು, ಡಿ.2: ಹೊಳೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಯೊಬ್ಬರು ಅಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಡಿ.2ರಂದು ಬೆಳಗ್ಗೆ ನಂದನವನ ಗ್ರಾಮದ ಪಕ್ಕಿಮನೆ ಎಂಬಲ್ಲಿ ನಡೆದಿದೆ.

ಮೃತರನ್ನು ನಂದನವನ ಪಕ್ಕಿಮನೆ ನಿವಾಸಿ ಚೆಣ್ಣಮ್ಮ(74) ಎಂದು ಗುರುತಿಸಲಾಗಿದೆ. ಇವರು ಮನೆಯ ಸಮೀಪವಿರುವ ಹೊಳೆಯ ದಡದ ಮೇಲೆ ನಡೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News