ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Update: 2021-12-02 15:01 GMT

ಬೆಂಗಳೂರು, ಡಿ.2: ವಾತಾವರಣದಲ್ಲಿ ಏರುಪೇರಿನಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿ.5ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರು, ಮೈಸೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ತುಮಕೂರು ಸೇರಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಚಾಮರಾಜನಗರ, ಕೋಲಾರ, ಮಂಡ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  

ಸದ್ಯ ಮಳೆಯ ಮಾರುತಗಳು ಕರ್ನಾಟಕ, ಮಹಾರಾಷ್ಟ್ರದ ಕಡೆಗೆ ಚಲನೆ ಮಾಡಿದ್ದು, ಭಾರೀ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News