ಉಡುಪಿ: ದಿನದಲ್ಲಿ 10 ಮಂದಿ ಕೋವಿಡ್‌ಗೆ ಪಾಸಿಟಿವ್

Update: 2021-12-02 15:31 GMT

ಉಡುಪಿ, ಡಿ.2: ಜಿಲ್ಲೆಯಲ್ಲಿ ಇಂದು ಹತ್ತು ಮಂದಿ ಕೊರೋನಾ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ಇಂದು ಮೂವರು ಕೋವಿಡ್‌ ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದರೆ, 70 ಮಂದಿ ಇನ್ನೂ ಸೋಂಕಿಗೆ ಚಿಕಿತ್ಸೆ ಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ತಲಾ ಐವರು ಪುರುಷ ಹಾಗೂ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ ಎಂಟು ಮಂದಿ ಉಡುಪಿ, ತಲಾ ಒಬ್ಬರು ಕುಂದಾಪುರ ಹಾಗೂ ಕಾರ್ಕಳ ತಾಲೂಕಿನವರು. ಪಾಸಿಟಿವ್ ಬಂದ ಇಬ್ಬರನ್ನು ಕೋವಿಡ್ ಆಸ್ಪತ್ರೆಗೆ ಹಾಗೂ ಉಳಿದ ಎಂಟು ಮಂದಿಯನ್ನು ಅವರವರ ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಹ ಜಿಲ್ಲೆಯಲ್ಲಿ ಕೊರೋನದಿಂದ ಯಾರೂ ಮೃತಪಟ್ಟಿಲ್ಲ.

ಬುಧವಾರ ಸೋಂಕಿನಿಂದ ಮೂವರು ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,358ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3558 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,904ಕ್ಕೇರಿದೆ.

7373 ಮಂದಿಗೆ ಲಸಿಕೆ:  ಜಿಲ್ಲೆಯಲ್ಲಿ ಗುರುವಾರ ಒಟ್ಟು 7373 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 1293 ಮಂದಿ ಮೊದಲ ಡೋಸ್ ಹಾಗೂ 6080 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 782 ಮಂದಿ ಮೊದಲ ಡೋಸ್ ಹಾಗೂ 4178 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 511 ಮಂದಿ ಮೊದಲ ಡೋಸ್ ಹಾಗೂ 1896 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಅಲ್ಲದೇ ನಾಲ್ವರು ಆರೋಗ್ಯ ಕಾರ್ಯಕರ್ತರು ಹಾಗೂ ಇಬ್ಬರು ಮುಂಚೂಣಿ ಕಾರ್ಯಕರ್ತರು ಸಹ ಎರಡನೇ ಡೋಸ್ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News