ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ತೊಂದರೆಗಳನ್ನು ಪರಿಶೀಲಿಸಲು ಶಿಕ್ಷಣ ಸಚಿವರಿಗೆ ಮನವಿ

Update: 2021-12-02 18:47 GMT

ಬೆಂಗಳೂರು, ಡಿ.2: ಈಗಾಗಲೇ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಗಳು ಪ್ರಾರಂಭಗೊಂಡು ಪ್ರಗತಿ ಹಂತದಲ್ಲಿವೆ. ಆದರೆ ವರ್ಗಾವಣಾ ಪ್ರಕ್ರಿಯೆಯಲ್ಲಿ ಶಿಕ್ಷಕರಿಗೆ ಆಗುತ್ತಿರುವ ತೊಂದರೆಗಳನ್ನು ಪರಿಶೀಲಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ತಿಳಿಸಿದ್ದಾರೆ. 

ಈ ಕುರಿತು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‍ರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳ ಬದಲಾಗಿ ಮಂಜೂರಾದ ಹುದ್ದೆಗಳಿಗೆ ಶೇ.25ರಷ್ಟು ಪರಿಗಣಿಸಿ, ವರ್ಗಾವಣೆ ಮಾಡಲು ಆದೇಶಿಸಲಾಗಿದೆ. ಆದರೆ ರಾಯಚೂರು, ಯಾದಗಿರಿ ಜಿಲ್ಲೆಗಳು ಸಂಪೂರ್ಣವಾಗಿ ವರ್ಗಾವಣೆಯಿಂದ ವಂಚಿತವಾಗಿದ್ದು, ಬಳ್ಳಾರಿ, ಚಿಕ್ಕೋಡಿ, ಕೊಪ್ಪಳ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಶೇ.25ಕ್ಕಿಂತ ಹೆಚ್ಚು ಖಾಲಿ ಹುದ್ದೆಗಳಿರುವ ತಾಲ್ಲೂಕಿನಿಂದ ಒಳಗಡÉ ಹಾಗೂ ಹೊರಗಡೆ ವರ್ಗಾವಣೆ ನೀಡದೇ ಇರುವುದು. ರಾಜ್ಯದ ಶಿಕ್ಷಕರ ಸಮುದಾಯಕ್ಕೆ ಸಾಕಷ್ಟು ನಿರಾಸೆಯಾಗಿದ್ದು, ಸದರಿ ವಿಷಯವನ್ನು ಮಾನ್ಯ ಸಚಿವರ ಗಮನಕ್ಕೆ ತರಲಾಯಿತು ಎಂದರು. 

ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಾವಳಿಗೂ ಕೂಡ ತಿದ್ದುಪಡಿ ತರಬೇಕೆಂದು ಹಾಗೂ ಶಿಕ್ಷಕರ ಭಡ್ತಿಗಾಗಿ ನಿಗದಿಗೊಳಿಸಿದ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಲಾಯಿತು. ಸಚಿವರು ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News