ಉಡುಪಿ ಶ್ರೀ ಕೃಷ್ಣಮಠಕ್ಕೆ ರಾಜ್ಯಪಾಲರ ಭೇಟಿ

Update: 2021-12-03 04:37 GMT

ಉಡುಪಿ, ಡಿ.3: ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಮುಂಜಾನೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ರಾಜ್ಯಪಾಲರನ್ನು ಅದಮಾರು ಪರ್ಯಾಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಪರ್ಯಾಯ ಮಂಗಲೋತ್ಸವದ ಆಮಂತ್ರಣ ಪತ್ರಿಕೆ ನೀಡಿದರು.

ಈ ವೇಳೆ ಶಾಸಕ ರಘುಪತಿ ಭಟ್, ಪರ್ಯಾಯ ಮಠದ ವ್ಯವಸ್ಥಾಪಕ ಗೋವಿಂದರಾಜ್, ಶ್ರೀ ಕೃಷ್ಣಾ ಸೇವಾ ಬಳಗದ ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ರಾಜ್ಯಪಾಲರು ಇಲ್ಲಿಂದ ಕೊಲ್ಲೂರಿಗೆ ತೆರಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News