ಸಾಮಾಜಿಕ ಹೋರಾಟಗಾರ್ತಿ ಸುಧಾ ಭಾರದ್ವಾಜ್ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಕದ ತಟ್ಟಿದ ಎನ್ ಐಎ

Update: 2021-12-03 05:20 GMT

ಹೊಸದಿಲ್ಲಿ: ಭೀಮಾಕೋರೆಗಾಂವ್ ಪ್ರಕರಣದಲ್ಲಿ ವಕೀಲೆ-ಸಾಮಾಜಿಕ ಹೋರಾಟಗಾರ್ತಿಸುಧಾ ಭಾರದ್ವಾಜ್ ಅವರಿಗೆ ಜಾಮೀನು ಮಂಜೂರು ಮಾಡಿದ ಬಾಂಬೆ ಹೈಕೋರ್ಟ್ ನ  ಡಿಸೆಂಬರ್ 1 ರ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು NDTV ವರದಿ ಮಾಡಿದೆ.

2018 ರಿಂದ ಜೈಲಿನಲ್ಲಿರುವ ಸುಧಾ ಭಾರದ್ವಾಜ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಡೀಫಾಲ್ಟ್ ಜಾಮೀನು ಮಂಜೂರು ಮಾಡಿದೆ.  ಆದೇಶವನ್ನು ನೀಡಿದ ನ್ಯಾಯಮೂರ್ತಿಗಳಾದ ಎಸ್‌.ಎಸ್. ಶಿಂಧೆ ಮತ್ತು ಎನ್‌.ಜೆ. ಜಮಾದಾರ್ ಅವರ ಪೀಠ, ಮುಂಬೈ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ಡಿಸೆಂಬರ್ 8 ರಂದು ಪ್ರಕರಣವನ್ನು ಕೈಗೆತ್ತಿಕೊಳ್ಳಲು ಸುಧಾ ಅವರ ಜಾಮೀನು ಮತ್ತು ಬಿಡುಗಡೆಯ ದಿನಾಂಕದ ಷರತ್ತುಗಳನ್ನು ನಿರ್ಧರಿಸಲು ನಿರ್ದೇಶಿಸಿದೆ.

ಕೋರೆಗಾಂವ್-ಭೀಮಾ ಪ್ರಕರಣವು ಡಿಸೆಂಬರ್ 31, 2017 ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದೆ. ಈ ಭಾಷಣವು ಸಮಾವೇಶದ ಮರುದಿನ ಪುಣೆಯ ಹೊರವಲಯದಲ್ಲಿರುವ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿತು ಎಂದು ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News