ದ್ವಿತೀಯ ಟೆಸ್ಟ್: ಚರ್ಚೆ ಹುಟ್ಟುಹಾಕಿದ ವಿರಾಟ್ ಕೊಹ್ಲಿಯ ವಿವಾದಾತ್ಮಕ ಔಟ್ ತೀರ್ಪು

Update: 2021-12-03 14:17 GMT
Photo: Twitter

ಮುಂಬೈ: ನ್ಯೂಝಿಲ್ಯಾಂಡ್ ವಿರುದ್ಧ ಶುಕ್ರವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆರಂಭವಾಗಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ  ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ರನ್  ಖಾತೆ ತೆರೆಯುವ ಮೊದಲೇ ಔಟಾದರು. ಆದರೆ ಕೊಹ್ಲಿಯವರು ಔಟ್ ಅಥವಾ ನಾಟೌಟ್ ಎಂಬ ಕುರಿತು ಚರ್ಚೆ ಆರಂಭವಾಗಿದೆ.

ಇಜಾಝ್  ಪಟೇಲ್ ಅವರ ಬೌಲಿಂಗ್‌ನಲ್ಲಿ ಕೊಹ್ಲಿ ಎಲ್ಬಿಡಬ್ಲ್ಯೂ ಬಲೆಗೆ ಬಿದ್ದರು. ಆಗ ಕೊಹ್ಲಿ ಅಂಪೈರ್ ತೀರ್ಪು ಪರಾಮರ್ಶೆ(ಡಿಆರ್ ಎಸ್)ಮೊರೆ ಹೋಗಲು ನಿರ್ಧರಿಸಿದರು, ಡಿಆರ್ ಎಸ್ ನಲ್ಲಿ ಆನ್-ಫೀಲ್ಡ್ ಅಂಪೈರ್ ನಿರ್ಧಾರವನ್ನು ರದ್ದುಗೊಳಿಸಲು ಯಾವುದೇ ನಿರ್ಣಾಯಕ ಪುರಾವೆ ಲಭಿಸಲಿಲ್ಲ.

ಮೂರನೇ ಅಂಪೈರ್ ವೀರೇಂದ್ರ ಶರ್ಮಾ ಅವರು ಮೂಲ ನಿರ್ಧಾರಕ್ಕೆ ಅಂಟಿಕೊಳ್ಳುವಂತೆ ಆನ್-ಫೀಲ್ಡ್ ಅಂಪೈರ್ ಅನಿಲ್ ಚೌಧರಿ ಅವರನ್ನು ಕೇಳಿದರು ಹಾಗೂ ಔಟ್ ಆಗಿದ್ದನ್ನು ನಂಬಲಾಗದೆ ವಿರಾಟ್ ಕೊಹ್ಲಿ ಡ್ರೆಸ್ಸಿಂಗ್ ರೂಮ್ ನತ್ತ ತೆರಳಿದರು.

ವಿರಾಟ್ ಕೊಹ್ಲಿ ವಿವಾದಾತ್ಮಕವಾಗಿ ಔಟಾಗಿರುವುದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ್ದು, ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.

ಇದಕ್ಕೂ ಮುನ್ನ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನ್ಯೂಝಿಲ್ಯಾಂಡ್  ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News