×
Ad

ಗುಜರಾತ್ ಕಾಂಗ್ರೆಸ್ ಅಧ್ಯಕ್ಷರಾಗಿ ಜಗದೀಶ್ ಠಾಕೂರ್ ನೇಮಕ

Update: 2021-12-03 23:28 IST
Credit: jagdishthakor.com

ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಮಿತ್ ಚಾವ್ಡಾ ಅವರಿಂದ ತೆರವಾಗಿರುವ  ಗುಜರಾತ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರನ್ನಾಗಿ ಜಗದೀಶ್ ಠಾಕೂರ್ ಅವರನ್ನು ನೇಮಿಸಿದ್ದಾರೆ.

ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಈ ನೇಮಕವಾಗಿದ್ದು, ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ಕಳಪೆ ನಿರ್ವಹಣೆಯ ನೈತಿಕಹೊಣೆ ಹೊತ್ತು ಅಮಿತ್ ಚಾವ್ಡಾ ರಾಜೀನಾಮೆ ನೀಡಿದ 9 ತಿಂಗಳ ಬಳಿಕ ಗುಜರಾತ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಜಿ ಸಂಸದ ಹಾಗೂ ಇತರ ಹಿಂದುಳಿದ ವರ್ಗದ(ಒಬಿಸಿ)ಪ್ರಬಲ ನಾಯಕ ಠಾಕೂರ್ ಅವರನ್ನು ಅಧಿಕೃತವಾಗಿ ನೇಮಿಸಲಾಗಿದೆ.

"ಕಾಂಗ್ರೆಸ್ ಅಧ್ಯಕ್ಷರು ಜಗದೀಶ್ ಠಾಕೂರ್ ಅವರನ್ನು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ತಕ್ಷಣವೇ ಜಾರಿಗೆ ಬರುವಂತೆ ನೇಮಿಸಿದ್ದಾರೆ" ಎಂದು ಪಕ್ಷದ ಅಧಿಕೃತ ಹೇಳಿಕೆ ಶುಕ್ರವಾರ ತಿಳಿಸಿದೆ.

ನಿರ್ಗಮಿತ ಪಿಸಿಸಿ ಅಧ್ಯಕ್ಷ ಅಮಿತ್ ಚಾವ್ಡಾ ಅವರ ಕೊಡುಗೆಯನ್ನು ಪಕ್ಷವು ಪ್ರಶಂಸಿಸುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News