ನೀಟ್ ಕುರಿತು ರಾಜ್ಯಸಭೆಯಲ್ಲಿ ಮಸೂದೆ ಮಂಡಿಸಿದ ಡಿಎಂಕೆ ಸಂಸದ ವಿಲ್ಸನ್

Update: 2021-12-04 09:26 GMT
Photo: PTI

ಹೊಸದಿಲ್ಲಿ: ರಾಜ್ಯಸಭೆಯಲ್ಲಿ ಡಿಎಂಕೆ ಸದಸ್ಯ ಪಿ. ವಿಲ್ಸನ್ ಶುಕ್ರವಾರ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಿದರು. ಈ ಮಸೂದೆಯು ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಿಂದ (ನೀಟ್) ಹೊರಗುಳಿಯುವ ಆಯ್ಕೆಯನ್ನು ರಾಜ್ಯಗಳಿಗೆ ನೀಡುತ್ತದೆ.

ವಿಲ್ಸನ್  ಅವರು ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯಿದೆ, 2019 ಹಾಗೂ  ದಂತವೈದ್ಯರ ಕಾಯಿದೆ, 1948 ಅನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಿದರು.  ಇದು  ಪದವಿಪೂರ್ವ, ಸ್ನಾತಕೋತ್ತರ ಮತ್ತು ಡಿಪ್ಲೊಮಾ ವೈದ್ಯಕೀಯ ಮತ್ತು ದಂತ ಕೋರ್ಸ್ಗಳಿಗೆ ಮತ್ತು ಎಂಬಿಬಿಎಸ್ ವಿದ್ಯಾರ್ಥಿಗಳು ಪ್ರಾಕ್ಟೀಷನರ್ ಲೈಸೆನ್ಸ್ ಪಡೆಯಲು ರಾಷ್ಟ್ರೀಯ ನಿರ್ಗಮನ ಪರೀಕ್ಷೆಗಾಗಿ ನೀಟ್ ನಿಂದ ಹೊರಗುಳಿಯುವ ಆಯ್ಕೆಯನ್ನು ರಾಜ್ಯಗಳಿಗೆ ನೀಡುತ್ತದೆ.

ತಮಿಳುನಾಡಿನಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ನಂತರ ಹಲವಾರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ನೀಟ್ ಅನ್ನು ತೆಗೆದುಹಾಕುವ ಬೇಡಿಕೆಯು ಪ್ರಮುಖ ವಿಷಯವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News