ಡಿ.5ರಂದು ಕೆಎಂಜೆ ಜಮಾಅತ್ ಅದಾಲತ್

Update: 2021-12-04 14:52 GMT

ಬ್ರಹ್ಮಾವರ, ಡಿ.4: ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ವಕ್ಫ್ ಸಂಭಂದಿಸಿದ ವಿಚಾರಗಳ ವಿನಿಮಯ ಎಂಬ ವಿಶೇಷ ಕಾರ್ಯಕ್ರಮ ಜಮಾಅತ್ ಅದಾಲತ್ ಹಾಗೂ ರಾಜ್ಯ ವಕ್ಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಕೆ.ಎಂ.ಶಾಫಿ ಸಅದಿ ಬೆಂಗಳೂರು ಅವರಿಗೆ ಗೌರವಾರ್ಪಣೆ ಕಾರ್ಯಕ್ರಮವು ರವಿವಾರ ಸಂಜೆ 4ಗಂಟೆಗೆ ಬ್ರಹ್ಮಾವರ ಬಂಟರ ಭವನದಲ್ಲಿ ನಡೆಯಲಿದೆ.

ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾಧ್ಯಕ್ಷ ಬಿ ಎಸ್‌ಎಫ್ ರಫೀಕ್ ಗಂಗೊಳ್ಳಿ ಅಧ್ಯಕ್ಷತೆ ವಹಿಸಲಿರುವರು. ಮುಸ್ಲಿಂ ಜಮಾಅತ್ ಜಿಲ್ಲಾ ಉಪಾಧ್ಯಕ್ಷ ಅಸ್ಸಯ್ಯಿದ್ ಜಾಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ ದುಆದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವರು.

ರಾಜ್ಯ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಅಬ್ದುಲ್ ಹಮೀದ್ ಬಜ್ಪೆ ಸಮುದಾಯ ಎದುರಿಸುತ್ತಿರುವ ಸವಾಲುಗಳು ಎಂಬ ವಿಷಯದಲ್ಲಿ ವಿಷಯ ಮಂಡಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News