ಹೆಬ್ರಿ ದೇವಾಡಿಗರ ಸುಧಾರಕ ಸಂಘದ ಕಟ್ಟಡದ ನಿರ್ಮಾಣಕ್ಕೆ 3 ಲಕ್ಷ ರೂ. ಹಸ್ತಾಂತರ

Update: 2021-12-04 15:04 GMT

ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಹೆಬ್ರಿ ದೇವಾಡಿಗರ ಸುಧಾರಕ ಸಂಘದ ಕಟ್ಟಡದ ನಿರ್ಮಾಣಕ್ಕೆ ಮಂಜೂರುಗೊಳಿಸಿದ 3 ಲಕ್ಷ ರೂ. ಅನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಭಾಸ್ಕರ್ ವಿ. ಅವರು ಶನಿವಾರ ಸಂಘದ ಪ್ರಮುಖರಿಗೆ ಹಸ್ತಾಂತರಿಸಿದರು.

ಕೇಂದ್ರ ಸಮಿತಿ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಹೆಗ್ಡೆ, ಹೆಬ್ರಿ ಸಿಟಿ ಒಕ್ಕೂಟದ ಅಧ್ಯಕ್ಷ ರಾಜೇಶ್ ಆಚಾರ್ಯ, ಸೇವಾ ಪ್ರತಿನಿಧಿ ಕಾಂತಿ ಹೆಗ್ಡೆ, ಹೆಬ್ರಿ ದೇವಾಡಿಗರ ಸುಧಾರಕ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News