×
Ad

ಇಲಾಖಾ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಸಚಿವ ಸಿ.ಸಿ.ಪಾಟೀಲ್

Update: 2021-12-04 23:24 IST

ಬೆಂಗಳೂರು, ಡಿ.4: ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಶನಿವಾರ ಬೆಂಗಳೂರಿನಲ್ಲಿರುವ ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್‍ಗಳ ಕಚೇರಿಗಳಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಅಭಿವೃದ್ಧಿ ಕಚೇರಿ, ಕೆಶಿಪ್ ಕಚೇರಿಗಳಿಗೆ ಅನಿರೀಕ್ಷಿತವಾಗಿ ಭೇಟಿ ಕೊಟ್ಟು ಅಲ್ಲಿಯ ಕಾರ್ಯ ವೈಖರಿಗಳನ್ನು ಖುದ್ದಾಗಿ ಪರಿಶೀಲಿಸಿದರು ಹಾಗೂ ಇಲಾಖೆಗಳಲ್ಲಿ-ಕಚೇರಿಗಳ ನಿರ್ವಹಣೆಯಲ್ಲಿ ಕೈಗೊಳ್ಳಬೇಕಾದ ಸುಧಾರಣೆಗಳ ಬಗ್ಗೆ ಸೂಕ್ತ ಸೂಚನೆಗಳನ್ನು ನೀಡಿದರು.

ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಕೃಷ್ಣಾ ರೆಡ್ಡಿ ಮತ್ತಿತರ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News