ಬೆಳ್ತಂಗಡಿ: ರಬ್ಬರ್ ತೋಟದಲ್ಲಿ 9 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!

Update: 2021-12-05 09:40 GMT

ಬೆಳ್ತಂಗಡಿ, ಡಿ.5: ರಬ್ಬರ್ ತೋಟವೊಂದರಲ್ಲಿ ಸುಮಾರು 8ರಿಂದ 9 ಅಡಿ ಉದ್ದದ ಮೊಸಳೆಯೊಂದು ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಸಮೀಪದ ಕುಂದೂರು ಎಂಬಲ್ಲಿ ಕಂಡುಬಂದಿದೆ.

 ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಕುದೂರು ನಿವಾಸಿ ಸದಾಶಿವ ಎಂಬವರ ರಬ್ಬರ್ ತೋಟ ಸಮೀಪದ ತೋಡಿನಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಸ್ಥಳೀಯ ನಿವಾಸಿಗಳಾದ ಸಂತೋಷ್ ಎಂಬವರು ಇಂದು ರಬ್ಬರ್ ತೋಟದ ಸೊಪ್ಪು ಸ್ವಚ್ಛಗೊಳಿಸುವ ವೇಳೆ ಮೊಸಳೆ ಪ್ರತ್ಯಕ್ಷವಾಗಿದೆ.

ಈ ಬಗ್ಗೆ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮೊಸಳೆಯನ್ನು ಸೆರೆ ಹಿಡಿಯುವ ಕಾರ್ಯಕ್ಕೆ ಮುಂದಾಗಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News