ಸಿದ್ದರಾಮಯ್ಯ, ಡಿಕೆಶಿಯ ಹಗುರವಾದ ಮಾತಿಗೆ ಬೆಳಗಾವಿ ಅಧಿವೇಶನದಲ್ಲಿ ಉತ್ತರಿಸುವೆ: ಬಿ.ಎಸ್.ಯಡಿಯೂರಪ್ಪ

Update: 2021-12-05 13:21 GMT

ಚಾಮರಾಜನಗರ: 'ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ  ಡಿ.ಕೆ ಶಿವಕುಮಾರ್ ಅವರ ಹಗುರವಾದ ಮಾತುಗಳಿಗೆ ಈಗ ಉತ್ತರ ಕೊಡುವ ಅಗತ್ಯವಿಲ್ಲ, ಎಲ್ಲವನ್ನು ಬೆಳಗಾವಿ ಅಧಿವೇಶನದಲ್ಲಿ ಮಾತನಾಡುತ್ತೇನೆ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಅವರು ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿರುವ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ವಿಧಾನ ಪರಿಷತ್ ಚುನಾವಣೆ ಸಂಬಂಧ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಹಲವು ಹಿಂದೂ ಮುಂದೆ ನೋಡುವ ಈ ಪರಿಸ್ಥಿತಿಯಲ್ಲಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ. ಅಂದಿನಿಂದ ನಾನು ಮನೆ ಸೇರಿಲ್ಲ, ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ 140 ಸ್ಥಾನಗಳನ್ನು ಆಯ್ಕೆ ಮಾಡಲು ಇಡೀ ರಾಜ್ಯದಲ್ಲಿ ಸುತ್ತಾಡಿ ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಎಂದರು.

ಮೈಸೂರು ಚಾಮರಾಜನಗರ ಜಿಲ್ಲೆಗಳ ದ್ವಿ ಸದಸ್ಯ ವಿಧಾನ ಪರಿಷತ್ ಸದಸ್ಯ ಸ್ಥಾನದ ಚುನಾವಣೆಯಲ್ಲಿ ಉಭಯ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಮತದಾರರು ಕೇವಲ ಮೊದಲ  ಪ್ರಾಶಸ್ತ್ಯ ಮತ ನೀಡಲು ಗಮನಹರಿಸಿ ಎರಡನೇ ಪ್ರಾಶಸ್ಯ್ತ ಮತದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಅವರು ಮತದಾರರಿಗೆ ಮನವಿ ಮಾಡಿದರು.

ಅವರು ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿರುವ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ವಿಧಾನ ಪರಿಷತ್ ಚುನಾವಣೆ ಸಂಬಂಧ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,  ಸ್ಥಳೀಯ ಸಂಸ್ಥೆಗಳ ಬಗ್ಗೆ ಗಂಭೀರವಾಗಿ ಚರ್ಚೆ ಮಾಡುವವರನ್ನು ಆಯ್ಕೆ ಮಾಡಬೇಕು, ಹಣದ ಬಲ, ಜಾತಿ ಬಲ, ತೋಳ್ಬಲದಿಂದ ಗೆಲ್ಲುವ ಕಾಲ ಹಿಂದೆ ಇತ್ತು. ಅದು ಈಗ ಮುಕ್ತವಾಗಿದೆ, ಮತದಾರರು ಪ್ರಜ್ಞಾವಂತರಾಗಿದ್ದಾರೆ 330 ಲೋಕಸಭಾ ಸದಸ್ಯರಿದ್ದ ಕಾಂಗ್ರೇಸ್ ಪಕ್ಷ ಇದೀಗ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಯಾದ ಬಳಿಕ ಲೋಕಸಭೆಯಲ್ಲಿ 40 ಸ್ಥಾನಕ್ಕೆ ಬಂದರು. ನರೇಂದ್ರ ಮೋದಿ ಪ್ರಧಾನ ಮಂತ್ರಿಯಾದ ಬಳಿಕ ದೇಶದಲ್ಲಿ ಕಾಂಗ್ರೇಸ್ ದೂಳಿ ಪಟವಾಗಿದೆ. 26 ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದೆ ಎಂದು ಯಡಿಯೂರಪ್ಪ ಹೇಳಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪರ ಒಲವು ವ್ಯಕ್ತವಾಗುತ್ತಿದೆ‌. ಎಲ್ಲಿ ಜೆಡಿಎಸ್ ಅಭ್ಯರ್ಥಿಗಳಿಲ್ಲವೋ ಅಲ್ಲಿ ಅವರ ಬೆಂಬಲ ಕೇಳಿದ್ದೇವೆ. 20 ಸ್ಥಾನಗಳಲ್ಲಿ 15 ರಿಂದ 17 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಶೇ.40 ಸರ್ಕಾರ ಎಂದು ಕಾಂಗ್ರೆಸ್ ಜರಿಯುತ್ತಿರುವ ಟೀಕೆಗೆ ಪ್ರತಿಕ್ರಿಯಿಸಿ, ಚುನಾವಣೆಯ ಫಲಿತಾಂಶವೇ ಅವರೆಲ್ಲಾ ಟೀಕೆಗೆ ಉತ್ತರ ಎಂದರು.

ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್, ಎನ್. ಮಹೇಶ್, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಮಾಜಿ ವಿಧಾನ ಪರಿಷತ್ ಸದಸ್ಯ ಸಿದ್ದರಾಜು, ಪ್ರೋ.ಕೆ.ಆರ್. ಮಲ್ಲಿಕಾರ್ಜಿನಪ್ಪ, ಕೇಂದ್ರ ಬರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್ ಸುಂದರ್ ಹಾಗೂ ಅನೇಕರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News