ಲಸಿಕೆ ಕಡ್ಡಾಯ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2021-12-05 13:24 GMT

ಬೆಂಗಳೂರು, ಡಿ.5: ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ಕೋವಿಡ್ ಲಸಿಕೆ 1ನೇ ಡೋಸ್ ಕಡ್ಡಾಯಗೊಳಿಸದಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂಬ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 

ಈ ವಿಚಾರವಾಗಿ ಮಂಗಳೂರಿನ ವೈದ್ಯ ಡಾ.ಶ್ರೀನಿವಾಸ ಬಿ. ಕಕ್ಕಿಲಾಯ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ವಿಚಾರದಲ್ಲಿ ಸರಕಾರಕ್ಕೆ ನಿರ್ದೇಶನ ನೀಡಲು ಬರುವುದಿಲ್ಲ ಎಂದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News