ರಾಜ್ಯದಲ್ಲಿಂದು 456 ಮಂದಿಗೆ ಕೊರೋನ ಪ್ರಕರಣ ದೃಢ: 6 ಮಂದಿ ಮೃತ್ಯು

Update: 2021-12-05 14:15 GMT

ಬೆಂಗಳೂರು, ಡಿ. 5: ರಾಜ್ಯದಲ್ಲಿ ರವಿವಾರ 456 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 6 ಮಂದಿ ಸೋಂಕಿಗೆ ಬಲಿಯಾಗಿದ್ದು, 330 ಜನರು ಗುಣಮುಖರಾಗಿದ್ದಾರೆ. 

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,230ಕ್ಕೆ ತಲುಪಿದೆ. 
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 7,132ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಆರು ಜನರ ಸಾವು: ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 2, ಮೈಸೂರು 1, ತುಮಕೂರು  1, ಉಡುಪಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 456 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 5, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 256, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 66, ಚಿತ್ರದುರ್ಗ 1, ದಕ್ಷಿಣ ಕನ್ನಡ 13, ದಾವಣಗೆರೆ 2, ಧಾರವಾಡ 20, ಹಾಸನ 12, ಕಲಬುರಗಿ 2, ಕೊಡಗು 17, ಕೋಲಾರ 2, ಮಂಡ್ಯ 3, ಮೈಸೂರು 10, ಶಿವಮೊಗ್ಗ 7, ತುಮಕೂರು 8, ಉಡುಪಿ 5, ಉತ್ತರ ಕನ್ನಡ ಜಿಲ್ಲೆಯಲ್ಲಿ 14 ಪ್ರಕರಣ ಪತ್ತೆಯಾಗಿವೆ. 

ರಾಜಧಾನಿಯಲ್ಲಿ 256 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ರವಿವಾರದಂದು 256 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,57,498 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,345 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,36,016 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News