ಪುದುಚೇರಿಯಲ್ಲಿ ಈಗ ಕೋವಿಡ್ ಲಸಿಕೆ ಕಡ್ಡಾಯ

Update: 2021-12-05 15:14 GMT

ಪುದುಚೇರಿ,ಡಿ.5: ಶೇ.100ರಷ್ಟು ಗುರಿಯನ್ನು ಸಾಧಿಸಲು ಉದ್ದೇಶಿಸಿರುವ ಕೇಂದ್ರಾಡಳಿತ ಪ್ರದೇಶ ಪುದುಚೇರಿಯು ಎಲ್ಲ ವ್ಯಕ್ತಿಗಳೂ ಕೋವಿಡ್ ಲಸಿಕೆಯನ್ನು ಪಡೆಯುವುದನ್ನು ಕಡ್ಡಾಯಗೊಳಿಸಿದೆ. ಲಸಿಕೆಯನ್ನು ತಪ್ಪಿಸಿಕೊಂಡವರು ಕಾನೂನಿನಡಿ ದಂಡನಾ ಕ್ರಮವನ್ನು ಎದುರಿಸಬೇಕಾಗುತ್ತದೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ ಜಿ.ಶ್ರೀರಾಮುಲು ಅವರು ಶವಿವಾರ ರಾತ್ರಿ ಆದೇಶವನ್ನು ಹೊರಡಿಸಿದ್ದು,ಅದು ತಕ್ಷಣದಿಂದಲೇ ಜಾರಿಗೆ ಬಂದಿದೆ.
ಲಸಿಕೆಯನ್ನು ತಪ್ಪಿಸಿಕೊಳ್ಳುವವರ ವಿರುದ್ಧ ಪುದುಚೇರಿ ಸಾರ್ವಜನಿಕ ಆರೋಗ್ಯ ಕಾಯ್ದೆ 1973ರಡಿ ದಂಡನಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶ್ರೀರಾಮುಲು ಆದೇಶದಲ್ಲಿ ತಿಳಿಸಿದ್ದಾರೆ.

ಎಲ್ಲ ಅರ್ಹ ಜನರಿಗೆ ಶೇ.100ರಷ್ಟು ಲಸಿಕೆ ನೀಡುವ ಗುರಿಯನ್ನು ಸಾಧಿಸಲು ಮತ್ತು ವೈರಸ್ ಸೋಂಕು ಹರಡುವಿಕೆಗೆ ಅವಕಾಶ ನೀಡದಿರಲು ಸರಕಾರವು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಸಾಂಕ್ರಾಮಿಕದ ಸಂದರ್ಭದಲ್ಲಿ ಕೆಲವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಸಾರ್ವಜನಿಕ ಕಾಯ್ದೆಯಡಿ ಅವಕಾಶವಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೋರ್ವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News