ಕಾರು ಢಿಕ್ಕಿ: ಅಪರಿಚಿತ ಮೃತ್ಯು

Update: 2021-12-05 16:29 GMT

ಕೋಟ, ಡಿ.5: ಚಿತ್ರಪಾಡಿ ಗ್ರಾಮದ ನರ್ತಕಿ ಬಾರ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಡಿ.4ರಂದು ಸಂಜೆ ವೇಳೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ 30 ರಿಂದ 35 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಉಡುಪಿ ಕಡೆಯಿಂದ ಕುಂದಾಪುರ ಕಡೆ ಹೋಗುತ್ತಿದ್ದ ಕಾರು, ರಸ್ತೆಯ ತೀರ ಎಡ ಭಾಗಕ್ಕೆ ಬಂದು ರಸ್ತೆ ದಾಟಲು ನಿಂತುಕೊಂಡಿದ್ದ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News