ಗೊಂದಲ, ಭಿನ್ನಾಭಿಪ್ರಾಯಯಗಳನ್ನು ಬದಿಗಿಟ್ಟು ಅಭಿವೃದ್ಧಿಯ ಕಡೆಗೆ ಗಮನಕೊಡೋಣ : ಶಾಫಿ ಸಅದಿ

Update: 2021-12-05 16:50 GMT

ಪುತ್ತೂರು: ಸಣ್ಣ ಪುಟ್ಟ ಗೊಂದಲ, ಭಿನ್ನಾಭಿಪ್ರಾಯ, ವಿವಾದ, ಚರ್ಚೆಗಳನ್ನು ಮುಂದಿಟ್ಟುಕೊಂಡು ನಮ್ಮ ಮೌಲ್ಯಯುತವಾದ ಸಮಯವನ್ನು ಕಳೆಯುವ ಬದಲು ಒಗ್ಗಟ್ಟಾಗಿಕೊಂಡು ಸಮುದಾಯದ ಮತ್ತು ಸಮಾಜದ ಅಭಿವೃದ್ಧಿಗಾಗಿ ಕೆಲಸ ಮಾಡೋಣ ಎಂದು ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಹೇಳಿದರು.

ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಸಮಿತಿ ಆಶ್ರಯದಲ್ಲಿ ಪುತ್ತೂರು ಟೌನ್ ಹಾಲ್‍ನಲ್ಲಿ ಡಿ.5ರಂದು ಪೌರ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ವಕ್ಫ್ ಇಲಾಖೆಯಲ್ಲಿ ಸಿಗುವ ಸವಲತ್ತುಗಳನ್ನು ತೆಗೆಸಿಕೊಡುವ ಬಗ್ಗೆ ಹಾಗೂ ಮೊಹಲ್ಲಾಗಳ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸುವುದಾಗಿ ಹೇಳಿದ ಶಾಫಿ ಸಅದಿ ಅವರು ನೀವು ನನ್ನ ಮೇಲಿಟ್ಟಿರುವ ಭರವಸೆಯನ್ನು ಈಡೇರಿಸಲು ಪ್ರಯತ್ನಿಸುವುದಾಗಿ ಹೇಳಿದರು.

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ, ಜಿ.ಪಂ ಮಾಜಿ ಸದಸ್ಯ ಎಂ.ಎಸ್ ಮಹಮ್ಮದ್ ಮಾತನಾಡಿದರು. ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಬಿ.ಪಿ ಇಸ್ಮಾಯಿಲ್ ಹಾಜಿ ಬೈತಡ್ಕ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಶಾಫಿ ಸಅದಿಯವರನ್ನು ಸನ್ಮಾನಿಸಲಾಯಿತು. ವಕ್ಫ್ ಬೋರ್ಡ್ ರಾಜ್ಯ ಸಮಿತಿ ಸದಸ್ಯ ಯಾಕೂಬ್ ಶಿವಮೊಗ್ಗ ಅವರನ್ನು ಸನ್ಮಾನಿಸಲಾಯಿತು. ನಂತರ ಜಮಾಅತ್ ಅಧಿವೇಶನ ನಡೆಯಿತು.

ವೇದಿಕೆಯಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದರು. ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಸಮಿತಿ ವರ್ಕಿಂಗ್ ಸೆಕ್ರೇಟರಿ ಅಬ್ದುಲ್ ರಶೀದ್ ಸಂಪ್ಯ ಸ್ವಾಗತಿಸಿದರು. ಉಪಾಧ್ಯಕ್ಷ ಮಹಮ್ಮದ್ ಹಾಜಿ ಕುಕ್ಕುವಳ್ಳಿ ವಂದಿಸಿದರು. ಕರ್ನಾಟಕ ಮುಸ್ಲಿಂ ಜಮಾಅತ್ ಕುಂಬ್ರ ವಲಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಹನೀಫ್ ರೆಂಜಲಾಡಿ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News