ಡಿ.7ಕ್ಕೆ ಡಿಪ್ಲೊಮಾ ಪರೀಕ್ಷೆಗಳ ಫಲಿತಾಂಶ

Update: 2021-12-06 13:57 GMT

ಬೆಂಗಳೂರು, ಡಿ. 6: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ಅಕ್ಟೋಬರ್/ನವೆಂಬರ್ ತಿಂಗಳಿನಲ್ಲಿ ನಡೆದ ತಾಂತ್ರಿಕ ಪರೀಕ್ಷಾ ಮಂಡಳಿಯ ಡಿಪ್ಲೊಮಾ ಪರೀಕ್ಷೆಗಳ ಫಲಿತಾಂಶವನ್ನು ನಾಳೆ(ಡಿ.7) ರಾಜ್ಯದಲ್ಲಿನ ಎಲ್ಲ ಪಾಲಿಟೆಕ್ನಿಕ್‍ಗಳಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು.

ವೆಬ್‍ಸೈಟ್ www.bteresults. net ನಲ್ಲಿ ಲಭ್ಯವಿರುತ್ತದೆ ಎಂದು ಬೆಂಗಳೂರಿನ ತಾಂತ್ರಿಕ ಪರೀಕ್ಷಾ ಮಂಡಳಿ ಕಾರ್ಯದರ್ಶಿಗಳು ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News