ಕಸ್ತೂರಿ ರಂಗನ್ ವರದಿ ತಿರಸ್ಕರಿಸುವಂತೆ ಕೇಂದ್ರ ಸಚಿವರಿಗೆ ಮನವಿ

Update: 2021-12-06 14:13 GMT

ಕುಂದಾಪುರ, ಡಿ. 6: ಕ್ಷೇತ್ರದ ಜನತೆಯ ಸಮಸ್ಯೆ ಅರಿತು ಕಸ್ತೂರಿ ರಂಗನ್ ವರದಿಯನ್ನು ಜಾರಿ ಮಾಡದೆ ಸಂಪೂರ್ಣವಾಗಿ ತಿರಸ್ಕರಿಸಬೇಕು. ಸ್ಥಳೀಯ ಪರಿಸ್ಥಿತಿ ಅಧ್ಯಯನ ಮಾಡಲು ರಾಜ್ಯ ಹಾಗೂ ಕೇಂದ್ರ ಸರಕಾರದ ಅಧಿಕಾರಿ ಗಳನ್ನೊಳಗೊಂಡ ಕಾರ್ಯಪಡೆ ರಚಿಸಬೇಕು ಹಾಗೂ ವನ್ಯಜೀವ ವಲಯದ ಗಡಿಯಿಂದ 5 ರಿಂದ 10 ಕಿ.ಮೀ ಪರಿಸರ ಸೂಕ್ಷ್ಮ ವಲಯದ ಬಫರ್ ಜೋನ್ ಪರಿಮಿತಿಯನ್ನು ರದ್ದುಪಡಿಸುವಂತೆ ಕೇಂದ್ರ ಅರಣ್ಯ, ಪರಿಸರ ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್‌ಗೆ ಮನವಿ ಸಲ್ಲಿಸದ್ದೇನೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಕಸ್ತೂರಿ ರಂಗನ್ ವರದಿ ಜಾರಿಯಾದರೆ ಬೈಂದೂರು ವಿಧಾನ ಸಭಾಕ್ಷೇತ್ರ ವ್ಯಾಪ್ತಿಯ ಹೊಸೂರು, ಬೈಂದೂರು, ಕೊಲ್ಲೂರು, ಯಳಜಿತ್, ತಗ್ಗರ್ಸೆ, ಮುದೂರು, ಗೋಳಿಹೊಳೆ, ಜಡ್ಕಲ್, ಹಳ್ಳಿಹೊಳೆ, ಆಲೂರು, ಚಿತ್ತೂರು, ಇಡೂರು ಕುಂಞಡಿ, ಕೆರಾಡಿ, ಬೆಳ್ಳಾಲ ಹಾಗೂ ವಂಡ್ಸೆ ಸೇರಿ 15 ಗ್ರಾಮಗಳ ಸಜನರಿಗೆ ತೀವ್ರ ತೊಂದರೆಗೊಳಗಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬೈಂದೂರ ವಿಧಾನಸಭಾ ಕ್ಷೇತ್ರಾದ್ಯಂತ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 11,435.35 ಕ್ವಿಂಟಾಲ್ ಪಡಿತರ ವಿತರಿಸಲಾಗಿದೆ. ನರೇಗಾ ದಲ್ಲಿ 2020-21ನೇ ಸಾಲಿನಲ್ಲಿ 1976 ಕಾಮಗಾರಿಗಳನ್ನು 1174.73 ಲಕ್ಷ ರೂ.ನಲ್ಲಿ ಕಾಮಗಾರಿ ಮಾಡಲಾಗಿದ್ದು, ಪ್ರಸ್ತುತ 2021-22ನೇ ಸಾಲಿನಲ್ಲಿ 2862 ಕಾಮಗಾರಿಗಳನ್ನು 2168.65 ಲಕ್ಷ ರೂ. ನಲ್ಲಿ ಕೈಗೆತ್ತಿಕೊಳ್ಳ ಲಾಗಿದೆ ಎಂದರು.

ಕಾರ್ಮಿಕ ಇಲಾಖೆ ವತಿಯಿಂದ ಬೈಂದೂರು ವಿಧಾನ ಸಭಾ ಕ್ಷೇತ್ರಾದ್ಯಂತ 7,000 ಆಹಾರ ಸಾಮಗ್ರಿ ಕಿಟ್ಗಳನ್ನು ನೀಡಲಾಗಿದೆ. ಕಾರ್ಮಿಕ ಇಲಾಖೆ ವತಿಯಿಂದ ಬೈಂದೂರು ಹಾಗೂ ಕುಂದಾಪುರ ತಾಲೂಕಿಗೆ 12,250 ಸುರಕ್ಷಾ ಹಾಗೂ ಪ್ರತಿ ರಕ್ಷಣಾ ಕಿಟ್ಗಳನ್ನು ನೀಡಲಾಗಿದೆ. ಬೈಂದೂರ ಹಾಗೂ ಕುಂದಾಪುರಕ್ಕೆ ಇನ್ನೂ 6,000 ಸುರಕ್ಷಾ ಕಿಟ್ಗಳು ಬರಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News